ಮತಾಂತರ ನಿಷೇಧಿಸಿ : ಚಿಮೂ

Chidananda Murthy
ಬೆಂಗಳೂರು, ನ. 5 : ಲವ್ ಜಿಹಾದ್ ನಿಯಂತ್ರಣಕ್ಕೆ ಮತಾಂತರ ನಿಷೇಧ ಕಾನೂನು ಜಾರಿಗೊಳಿಸಬೇಕು ಎಂದು ಡಾ.ಎಂ.ಚಿದಾನಂದ ಮೂರ್ತಿ ಆಗ್ರಹಿಸಿದರು. ಹಿಂದು ಯುವತಿಯರನ್ನು ಮತಾಂತರಗೊಳಿಸುವ ದುರುದ್ದೇಶದಿಂದ ಪ್ರೀತಿಯ ಬಲೆಯಲ್ಲಿ ಸಿಲುಕಿಸುವ ಹುನ್ನಾರ ನಡೆಯುತ್ತಿದೆ ಎಂಬುದು ಆತಂಕಕಾರಿ. ಇದನ್ನು ತಡೆಗಟ್ಟಲು ರಾಜ್ಯದಲ್ಲಿ ಮತಾಂತರ ನಿಷೇಧ ಕಾನೂನು ಜಾರಿಗೆ ಬರಬೇಕು ಎಂದು ಹೇಳಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 60 ರ ದಶಕದಲ್ಲಿಯೇ ಮಧ್ಯಪ್ರದೇಶ, ಒರಿಸ್ಸಾಗಳಲ್ಲಿ ಈ ಕಾನೂನು ಜಾರಿಗೆ ಬಂದಿದ್ದು, ಸುಪ್ರೀಂ ಕೋರ್ಟ್ ಕೂಡ ಇದನ್ನು ಎತ್ತಿ ಹಿಡಿದಿದೆ. ರಾಜ್ಯ ಸರಕಾರವೂ ಈ ದಿಸೆಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. 50 ಮಠಾಧೀಶರ ನೇತೃತ್ವದಲ್ಲಿ ಈ ಬಗ್ಗೆ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ.

ಮುಖ್ಯಮಂತ್ರಿ ಪರಿಶೀಲಿಸುವ ಭರವಸೆ ನೀಡಿದ್ದಾರೆ. ಭಯೋತ್ಪಾದಕ ಸಂಘಟನೆಗಳು ಲವ್ ಜಿಹಾದ್ ಬಗ್ಗೆ ಕರಪತ್ರಗಳನ್ನು ಮುದ್ರಿಸಿ ಹಂಚುತ್ತಿರುವುದು ಕೂಡ ಗಮನಕ್ಕೆ ಬಂದಿದೆ. ಇದನ್ನು ಸರಕಾರ ಗಮನಿಸಬೇಕು ಎಂದರು. ಬಹುಸಂಖ್ಯಾತರು ಹಿಂದುಗಳಾಗಿರುವುದರಿಂದ ಅಲ್ಪಸಂಖ್ಯಾತರ ರಕ್ಷಣೆಗೆ ಆದ್ಯತೆ ನೀಡಲಾಗುತ್ತದೆ. ಆದರೆ, ಬಹುಸಂಖ್ಯಾತರನ್ನು ರಕ್ಷಿಸುವವರಿಲ್ಲದಂತಾಗಿದೆ ಎಂದು ವಿಷಾದಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+