ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಐದು ವರ್ಷ ನಾನೇ ಮುಖ್ಯಮಂತ್ರಿ : ಯಡಿಯೂರಪ್ಪ

|
Google Oneindia Kannada News

Yeddyurappa
ಬೆಂಗಳೂರು, ನ. 9 : ಮುಂದಿನ ಮೂರು ಮುಕ್ಕಾಲು ವರ್ಷವೂ ನಾನೇ ಮುಖ್ಯಮಂತ್ರಿ. ಐದು ವರ್ಷಗಳ ಸುಭದ್ರ ಹಾಗೂ ಜನಪರ ಸರಕಾರವನ್ನು ಬಿಜೆಪಿ ನೀಡಲಿದೆ. ಸಚಿವರನ್ನು ಕೈಬಿಡುವ ವಿಷಯವನ್ನು ಕೋರ್ ಕಮೀಟಿಯಲ್ಲಿ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರೆಡ್ಡಿ ಸಹೋದರರು ಸೇರಿದಂತೆ ಎಲ್ಲ ಸಚಿವರು, ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆಡಳಿತ ನಡೆಸುವುದಾಗಿ ಹೇಳಿದರು. ಮುಂದಿನ ದಿನಗಳಲ್ಲಿ ನನ್ನ ಕಾರ್ಯವೈಖರಿಯನ್ನು ಬದಲಾಯಿಸಿಕೊಳ್ಳುವೆ. ತಿಳಿದೋ ತಿಳಿಯದೆಯೋ ನನ್ನಿಂದ ಕೆಲವು ತಪ್ಪುಗಳು ಆಗಿರಬಹುದು. ಇಂದಿನಿಂದ ಅಂತಹ ತಪ್ಪುಗಳ ಬಗ್ಗೆ ಎಚ್ಚರವಹಿಸುವೆ ಎಂದು ಯಡಿಯೂರಪ್ಪ ವಿವರಿಸಿದರು. ನಂತರ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪೀಕರ್ ಜಗದೀಶ್ ಶೆಟ್ಟರ್ ಮನಗೆ ತೆರಳಿ ಮಾತುಕತೆ ನಡೆಸಿ ಸಚಿವ ಸ್ಥಾನ ವಹಿಸಿಕೊಳ್ಳುವಂತೆ ಮನವೊಲಿಸಿದರು

ಬಿಜೆಪಿಯಲ್ಲಿ ಉಂಟಾಗಿದ್ದ ಭಿನ್ನಮತ ತಾತ್ಕಾಲಿಕವಾಗಿ ಶಮನವಾಗಿದೆ. 14 ದಿನಗಳ ಬಿಕ್ಕಟ್ಟು ಪಕ್ಷದ ವರ್ಚಸ್ಸಿಗೆ ಭಾರಿ ಪೆಟ್ಟು ಬಿದ್ದಿದೆ. ಸಂಪೂರ್ಣವಾಗಿ ಭಿನ್ನಮತವನ್ನು ಹೋಗಲಾಡಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದಗೌಡ ಹೇಳಿದರು. ಗಾಯವಾಗಿದೆ ವಾಸಿಯಾಗಲು ಕೆಲ ದಿನಗಳು ಬೇಕು ಎಂದು ಅವರು ಅಭಿಪ್ರಾಯಪಟ್ಟರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X