ಸಚಿವ ಸ್ಥಾನಕ್ಕೆ ಶೋಭಾ ಕರಂದ್ಲಾಜೆ ರಾಜೀನಾಮೆ
ಬೆಂಗಳೂರು,
ನ. 9 : ಯಡಿಯೂರಪ್ಪ ಸಂಪುಟದ ಏಕೈಕ ಮಹಿಳಾ ಸಚಿವೆ ಶೋಭಾ ಕರಂದ್ಲಾಜೆ ಅವರ ತಲೆದಂಡವಾಗಿದೆ. ಕರಂದ್ಲಾಜೆ ಅವರು ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕಳುಹಿಸಿದ್ದು, ಸಿಎಂ ಅದನ್ನು ಅಂಗೀಕರಿಸಿದ್ದಾರೆ. ಈ ಮೂಲಕ ಭಿನ್ನಮತೀಯ ಬಣದವರಿಗೆ ಎರಡನೇ ಜಯ ಸಿಕ್ಕಂತಾಗಿದೆ. id="toptextpromo">ಯಡಿಯೂರಪ್ಪ
ಅವರ ಸಂಪುಟದಲ್ಲಿ ಶೋಭಾ ಕರಂದ್ಲಾಜೆ ಅವರ ಕಾರ್ಯವೈಖರಿ ಎಲ್ಲರೂ ಮೆಚ್ಚುವಂತಹದ್ದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತ್ ರಾಜ್ ಸಚಿವೆಯಾಗಿದ್ದ ಅವರು ತಮ್ಮ ಖಾತೆಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿದ್ದರು. ಜೊತೆಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವೆಯಾಗಿ ಮೈಸೂರು ದಸರಾ ಕಾರ್ಯಕ್ರಮವನ್ನು ಎರಡು ಬಾರಿ ಯಶಸ್ವಿಯಾಗಿ ನಡೆಸಿಕೊಟ್ಟಿದ್ದು ಅವರ ಹೆಗ್ಗಳಿಕೆ. ಶೋಭಾ ಕರಂದ್ಲಾಜೆ ಅವರು ಬೇರೆ ಖಾತೆಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಆರೋಪ ಅವರ ಮೇಲಿತ್ತು. id='are-slot-1' class='oiad oi-axt oiadv'> id='top-searched-articles'>(ದಟ್ಸ್
ಕನ್ನಡ ವಾರ್ತೆ)











Click it and Unblock the Notifications