ಶೋಭಾ ಕರಂದ್ಲಾಜೆಗೆ ಬೇರೆ ಜವಾಬ್ದಾರಿ ಚಿಂತನೆ
ಬೆಂಗಳೂರು,
ನ. 9 : ಬೇರೆ ಖಾತೆಗಳಲ್ಲಿ ಹಸ್ತಕ್ಷೇಪದ ಮಾಡಿ ಸೂಪರ್ ಸಿಎಂ ಎಂಬ ಆರೋಪಕ್ಕೆ ಗುರಿಯಾಗಿದ್ದ ಶೋಭಾ ಕರಂದ್ಲಾಜೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಯಡಿಯೂರಪ್ಪ ಸಂಪುಟದಲ್ಲಿ ಉತ್ತಮ ಕೆಲಸಗಾರ್ತಿ ಎಂದು ಶಹಬ್ಬಾಸ್ ಗಿರಿ ಪಡೆದುಕೊಂಡಿದ್ದ ಶೋಭಾ ಅವರ ಸೇವೆಯನ್ನು ಪಕ್ಷ ಬಳಸಿಕೊಳ್ಳುವ ಸಾಧ್ಯತೆ ಇದೆ. id="toptextpromo">ಶೋಭಾ
ಕರಂದ್ಲಾಜೆ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಲವೇ ರಾಜ್ಯ ಬಿಜೆಪಿ ಮಹಿಳಾ ವಿಭಾಗದ ಅಧ್ಯಕ್ಷರನ್ನಾಗಿಸುವ ಚಿಂತನೆ ನಡೆದಿದೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ. ರೆಡ್ಡಿ ಗುಂಪಿನಿಂದ ಶೋಭಾ ಕರಂದ್ಲಾಜೆ ಅವರನ್ನು ಕೈಬಿಡಬೇಕು ಎಂಬ ಬಿಗಿಪಟ್ಟು ಎದುರಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕೈಬಿಡಲು ನಿರ್ಧರಿಸಿದ್ದಾರೆ. ಇಂದು ಇಲ್ಲವೇ ನಾಳೆ ರಾಜೀನಾಮೆ ಅಧಿಕೃತವಾಗಿ ಘೋಷಣೆಯಾಗಬಹುದು. id='are-slot-1' class='oiad oi-axt oiadv'> id='top-searched-articles'>(ದಟ್ಸ್
ಕನ್ನಡ ವಾರ್ತೆ)











Click it and Unblock the Notifications