ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬುಧವಾರದಿಂದ ಪವರ್ ಕಟ್: ಈಶ್ವರಪ್ಪ

|
Google Oneindia Kannada News

ಬೆಂಗಳೂರು,ನ. 10: ರಾಜ್ಯದಲ್ಲಿ ಬೇಡಿಕೆಯಷ್ಟು ವಿದ್ಯುತ್ ಉತ್ಪಾದನೆಯಾಗದ ಕಾರಣ ಈ ವಾರದಿಂದಲೇ ಲೋಡ್ ಶೆಡ್ಡಿಂಗ್ ಜಾರಿ ಮಾಡಲು ಯಡಿಯೂರಪ್ಪ ನೇತೃತ್ವದ ಭಾಜಪ ಸರ್ಕಾರ ತೀರ್ಮಾನಿಸಿದೆ. ಈ ಕುರಿತು ಇಂಧನ ಸಚಿವ ಕೆ.ಎಸ್. ಈಶ್ವರಪ್ಪ ಅವರು ತಮ್ಮ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮಂಗಳವಾರ ಮಾತುಕತೆ ನಡೆಸಿದರು. ನಾಳೆ ನವೆಂಬರ್ 11ರ ಬುಧವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಆ ಬಗ್ಗೆ ಸ್ಪಷ್ಟ ನಿಲುವು ಪ್ರಕಟಗೊಳ್ಳಲಿದೆ.

ಜಲವಿದ್ಯುತ್ ಹಾಗೂ ಶಾಖೋತ್ಪನ್ನ ಘಟಕಗಳಲ್ಲಿ ಸರಿಯಾದ ಪ್ರಮಾಣದಲ್ಲಿ ವಿದ್ಯುತ್ ಉತ್ಪಾದನೆಯಾಗುತ್ತಿಲ್ಲ. ಈ ಸಮಸ್ಯೆ ನಿವಾರಿಸಲು ಹೊರರಾಜ್ಯದಿಂದ ಹೆಚ್ಚುವರಿ ವಿದ್ಯುತ್ ಖರೀದಿ ಮಾಡಲು ಸಾಧ್ಯವಿಲ್ಲದ ಕಾರಣ ಲೋಡ್ ಶೆಡ್ಡಿಂಗ್ ಜಾರಿಗೆ ಸರ್ಕಾರ ಶರಣಾಗಿದೆ ಎಂದು ಈಶ್ವರಪ್ಪ ಹೇಳಿದ್ದಾರೆ.

ಸಂಪುಟದಲ್ಲಿ ತೀರ್ಮಾನ: ಇತ್ತೀಚಿನ ನೆರೆಯಿಂದ ರಾಯಚೂರು ಶಾಖೋತ್ಪನ್ನ ಘಟಕದಲ್ಲಿ ಹೆಚ್ಚು ಉತ್ಪಾದನೆ ಮಾಡಲಾಗಿಲ್ಲ.ಜತೆಗೆ ಜಲಾಶಯಗಳಲ್ಲಿರುವ ನೀರಿನ ಪ್ರಮಾಣ ಗಮನಿಸಿ ಮುಂದಿನ ಬೇಸಿಗೆವರೆಗೆ ವಿದ್ಯುತ್ ಉತ್ಪಾದನೆ ಮಾಡಲು ಕ್ರಮ ಕೈಗೊಳ್ಳಬೇಕಿದೆ.ಹೀಗಾಗಿ ನಗರ ಪ್ರದೇಶ ಸೇರಿ ರಾಜ್ಯದೆಲ್ಲೆಡೆ ಲೋಡ್ ಶೆಡ್ಡಿಂಗ್ ಜಾರಿಗೆ ಮುಂದಾಗಿದ್ದೇವೆ. ಆದರೆ ಈ ವಿಷಯನ್ನು ಸಚಿವಸಂಪುಟದಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಪ್ರಕಟಿಸಲಾಗುವುದು ಎಂದು ಸಚಿವ ಈಶ್ವರಪ್ಪ ತಿಳಿಸಿದ್ದಾರೆ.

ಸದ್ಯ ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಒಟ್ಟು 130 ಮೆ.ವ್ಯಾ. ವಿದ್ಯುತ್ ಬೇಡಿಕೆಯಿದ್ದು , 118 ಮೆ.ವ್ಯಾ. ವಿದ್ಯುತ್‌ನ್ನು ಗ್ರಾಹಕರಿಗೆ ವಿತರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ಪ್ರಮಾಣವನ್ನು ಇನ್ನಷ್ಟು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.

ಎಲ್ಲೆಲ್ಲಿ ಎಷ್ಟು ಗಂಟೆ ವಿದ್ಯುತ್

* ಬೆಂಗಳೂರಿಗೆ 23 ಗಂಟೆ ವಿದ್ಯುತ್ ( ನಂಬಬಹುದಾ)
* ಇತರ ನಗರ ಪ್ರದೇಶಗಳಿಗೆ 21 ಗಂಟೆ ( ನಂಬಲ್ಲ)
* ಗ್ರಾಮೀಣಕ್ಕೆ 3 ಫೇಸ್‌ನಲ್ಲಿ 15 ಗಂಟೆ ( ಇದು ಹೊಸದೇನಲ್ಲ)
* ಗ್ರಾಮೀಣ ಪಂಪ್‌ಸೆಟ್‌ಗೆ 6 ಗಂಟೆ ( ಸಾಕಾ?)

(ದಟ್ಸ್ ಕನ್ನಡವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X