ರೆಡ್ಡಿ ಅಕ್ರಮ ಗಣಿ ತನಿಖೆಗೆ ಸಮಿತಿ

AB Bardhan
ಹೈದರಾಬಾದ್, ನ. 11 : ಕರ್ನಾಟಕದ ಪ್ರವಾಸೋದ್ಯಮ ಸಚಿವ ಗಾಲಿ ಜನಾರ್ದನ ರೆಡ್ಡಿ ಮಾಲೀಕತ್ವದ ಓಬಳಾಪುರಂ ಮೈನಿಂಗ್ ಕಂಪೆನಿ (ಓಎಂಸಿ) ಅನಂತಪುರ ಜಿಲ್ಲೆಯಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆಯ ಕಾಯ್ದೆಗಳನ್ನು ಉಲ್ಲಂಘಿಸಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದೆ. ಇದನ್ನು ಕೂಡಲೇ ತಡೆಯಬೇಕು ಎಂದು ಆಂಧ್ರ ಪ್ರದೇಶದ ವಿರೋಧ ಪಕ್ಷಗಳು ಸರ್ಕಾರದ ಮೇಲೆ ತೀವ್ರ ಒತ್ತಡ ಹೇರಿದ ಹಿನ್ನೆಲೆಯಲ್ಲಿ ಸರ್ಕಾರ ಈ ಕುರಿತು ಸಮಗ್ರ ತನಿಖೆ ನಡೆಸಲು ಎರಡು ಪ್ರತ್ಯೇಕ ತನಿಖಾ ಸಮಿತಿಗಳನ್ನು ನೇಮಿಸಿದೆ.

ಮುಖ್ಯಮಂತ್ರಿ ಕೆ.ರೋಸಯ್ಯ ಅರಣ್ಯ ಮತ್ತು ಕೈಗಾರಿಕಾ ಸಚಿವಾಲಯದ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ. ಹತ್ತು ದಿನಗಳ ಒಳಗಾಗಿ ಈ ಸಮಿತಿ ತಮಗೆ ಪೂರ್ಣ ವರದಿ ಸಲ್ಲಿಸಬೇಕೆಂದೂ ಅವರು ಆದೇಶಿಸಿದ್ದಾರೆ. ಎರಡೂ ಸಮಿತಿಗಳು ತಲಾ ಮೂವರು ಸದಸ್ಯರನ್ನು ಒಳಗೊಂಡಿರುತ್ತವೆ.

ಈ ಮಧ್ಯೆ, ತೆಲುಗುದೇಶಂ ಪಕ್ಷವು ಕರ್ನಾಟಕ ಮತ್ತು ಆಂಧ್ರದಲ್ಲಿ ರಾಜಕಾರಣವನ್ನು ನಿಯಂತ್ರಿಸುತ್ತಿರುವ 'ಗಣಿ ಮಾಫಿಯ"ಕ್ಕೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿದೆ. ಗಣಿ ಮಾಫಿಯಾಗಳಿಗೆ ಮತ್ತಷ್ಟು ಗಣಿ ಗುತ್ತಿಗೆ ದೊರೆತರೆ ಅವು ಆರ್ಥಿಕವಾಗಿ ಮತ್ತಷ್ಟು ಬಲಶಾಲಿಯಾಗುತ್ತದೆ. ಖಾಸಗಿಯವರಿಗೆ ಗಣಿ ಗುತ್ತಿಗೆ ನೀಡುವ ಉದ್ದೇಶದಿಂದ ಸಿದ್ಧಪಡಿಸಿರುವ ಗಣಿ ನಿಯಂತ್ರಣ ಮಸೂದೆಯನ್ನು ಸಿಪಿಐ ವಿರೋಧಿಸಲಿದೆ ಎಂದು ಪ್ರಧಾನ ಕಾರ್ಯದರ್ಶಿ ಎ.ಬಿ.ಬರ್ಧನ್ ಹೇಳಿಕೆ ನೀಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+