ದೇಶಿ ಮಸ್ಲಿಮರು ಆತಂಕವಾದಿಗಳಲ್ಲ, ದೇವೇಗೌಡ

ಜೆಡಿಎಸ್ ಕಚೇರಿಯಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇಶದಲ್ಲಿ ಭಯೋತ್ಪಾದನೆ ಚಟುವಟಿಕೆಗಳು ನಡೆಯಲು ಹೊರಗಿನ ಶಕ್ತಿಗಳೇ ಹೊರತು, ಇಲ್ಲಿರುವವರಲ್ಲ ಎಂದರು. ದೇಶದಲ್ಲಿ ಭಯೋತ್ಪಾದನೆ ಹೆಚ್ಚಾಗಲು ಇಲ್ಲಿರುವ ವ್ಯವಸ್ಥೆಯೂ ಒಂದು ಕಾರಣವಾಗಿದೆ. ದೇಶದಲ್ಲಿ ಐಕ್ಯತೆ ಮತ್ತು ಸಹೋದರತ್ವ ಉಳಿಯಬೇಕಾಗಿದೆ ಎಂದು ಹೇಳಿದರು.
ದೇಶದಲ್ಲಿರುವ ಮುಸ್ಲಿಮರ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡಲು ರಂಗನಾಥ್ ಮಿಶ್ರಾ ಸಮಿತಿ ವರದಿ ಜಾರಿಯಾಗಬೇಕು. ಆದರೆ, ಕಾಂಗ್ರೆಸ್ ಪಕ್ಷದ ಸಚಿವರಾದ ಸಲ್ಮಾನ್ ಖುರ್ಷಿದ್ ಅವರೇ ಕೈಚೆಲ್ಲಿ ಕುಳಿತಿದ್ದಾರೆ ಎಂದರು. ಜೆಡಿಎಸ್ ಗೆ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ಕೈಹಿಡಿದರೆ ಕೇಂದ್ರದಲ್ಲಿ ಹೋರಾಟ ಮಾಡಲು ಸಾಧ್ಯವಾಗುತ್ತದೆ ಎಂದು ದೇವೇಗೌಡ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications