ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಾಯುಭಾರ : ಕರಾವಳಿ ಪ್ರದೇಶದಲ್ಲಿ ಭಾರಿ ಮಳೆ

|
Google Oneindia Kannada News

Mumbai rain
ಮಂಗಳೂರು / ಮುಂಬೈ, ನ. 11 : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಪಶ್ಚಿಮ ಕರಾವಳಿ ಘಟ್ಟ ಪ್ರದೇಶದಲ್ಲಿ ಬಲವಾಗಿ ಚಂಡಮಾರುತ ಬೀಸತೊಡಗಿದ್ದು, ಮಂಗಳೂರು, ಮುಂಬೈ, ಗುಜರಾತ್ ಕರಾವಳಿ ಪ್ರದೇಶದಲ್ಲಿ ಭಾರಿ ಪ್ರಮಾಣದ ಮಳೆ ಬೀಳುವ ಸಂಭವವಿದೆ. ಮಂಗಳೂರು ಮತ್ತು ಸುತ್ತಮುತ್ತ ಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಮಳೆ ಸುರಿಯತೊಡಗಿದೆ.

ಮೂರು ದಿನಗಳ ಕಾಲ ಕಡಲಿಗೆ ಇಳಿಯದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಮೀನುಗಾರರಿಗೆ ಎಚ್ಚರಿಕೆ ನೀಡಿದೆ. ಕಳೆದ 7 ತಾರೀಖಿನಂದು ಸಮುದ್ರದೊಳಗೆ ತೆರಳಿದ್ದ ಮೀನುಗಾರರ ಬೋಟ್ ನಾಪತ್ತೆಯಾಗಿದ್ದು, 11 ಮಂದಿ ಕಾಣಿಯಾಗಿದ್ದಾರೆ. ಆದರೆ, ಇತ್ತೀಚಿನ ವರದಿಗಳು ಬಂದಾಗ 5 ಮಂದಿ ಸುರಕ್ಷಿತವಾಗಿ ಇದ್ದಾರೆ ಎಂದು ಮೂಲಗಳು ತಿಳಿಸಿವೆ.

ಗಂಟೆಗೆ 70 ಕಿಮೀ ವೇಗದಲ್ಲಿ ಚಂಡಮಾರುತ ಬೀಸತೊಡಗಿದ್ದು, ಮಂಗಳೂರು, ಗೋವಾ, ಮುಂಬೈ, ಗುಜರಾತ್ ನ ಸೇರಿ ಪಶ್ಚಿಮ ಕರಾವಳಿಯ ಪ್ರದೇಶದಲ್ಲಿ ಇದರ ಪರಿಣಾಮ ಹೆಚ್ಚಾಗಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಮುಂಬೈಯಲ್ಲಿ ವಿಪರೀತ ಮಳೆ ಆಗುತ್ತಿದ್ದು, ಮುಂದಿನ 24 ಗಂಟೆಗಳಲ್ಲಿ ಇದರ ತೀವ್ರತೆ ಇನ್ನೂ ಹೆಚ್ಚಾಗಲಿದೆ. ತಗ್ಗು ಪ್ರದೇಶಗಳಲ್ಲಿರುವ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವುದು.

ಮಹಾರಾಷ್ಟ್ರ ಉತ್ತರ ಭಾಗದ ಕರಾವಳಿ ಪ್ರದೇಶದ ಜನತೆ ವಿಶೇಷ ಜಾಗೃತಿ ವಹಿಸಬೇಕು ಎಂದು ಇಲಾಖೆ ಹೇಳಿದೆ. ಮುಂಬೈಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕೇರಳ, ಕರ್ನಾಟಕ, ಗೋವಾ, ಮಹಾರಾಷ್ಟ್ರ, ಗುಜರಾತ್ ಮತ್ತು ಲಕ್ಷದ್ವೀಪಗಳಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸರಕಾರ ವಿಶೇಷ ಕ್ರಮಕೈಗೊಳ್ಳಬೇಕು ಎಂದು ಇಲಾಖೆ ಸ್ಪಷ್ಟಪಡಿಸಿದೆ.

(ಏಜನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X