ಗುಲ್ಬರ್ಗಾ ಬೌದ್ಧ ವಿಹಾರಕ್ಕೆ ದಲೈಲಾಮಾ ಭೇಟಿ

ಅವರು ಗುಲ್ಬರ್ಗಾದಲ್ಲಿ ದಲೈಲಾಮಾ ಭೇಟಿ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆವಹಿಸಿ ಬೌದ್ಧ ಧರ್ಮಗುರು ದಲೈಲಾಮಾ ಅವರು ಬೌದ್ಧವಿಹಾರದಲ್ಲಿ ಡಿಸೆಂಬರ್ 19 ಮತ್ತು 20ರಂದು ನಡೆಯುವ ಅಂತಾರಾಷ್ಟ್ರೀಯ ಶಾಂತಿ ಮತ್ತು ಸೌಹಾರ್ದತೆ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದರು.
ದಲೈಲಾಮಾ ಭೇಟಿ ಕಾರ್ಯಕ್ರಮಕ್ಕಾಗಿ ಎಲ್ಲ ಪೂರ್ವಭಾವಿ ಸಿದ್ಧತೆಗಳನ್ನು ಕೈಗೊಳ್ಳಲು ಕರ್ನಾಟಕ ಸರ್ಕಾರ 1.75 ಕೋಟಿ ರು. ಹಣ ಬಿಡುಗಡೆ ಮಾಡಿದೆ. ಈ ಕಾರ್ಯಕ್ರಮಕ್ಕಾಗಿ ಸಮರ್ಪಕ ರಸ್ತೆ, ವಿದ್ಯುತ್, ಕುಡಿಯುವ ನೀರು, ತಾತ್ಕಾಲಿಕ ಶೌಚಾಲಯಗಳ ವ್ಯವಸ್ಥೆ ಮಾಡುವಂತೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು. ಇದಲ್ಲದೆ ಅಲಂಕಾರಿಕ ಗಿಡಗಳ ಕುಂಡ, ಆಸನಗಳ ಹಾಗೂ ಇತರ ಎಲ್ಲ ವ್ಯವಸ್ಥೆ ಮಾಡಬೇಕು. ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷ ಉಂಟಾಗದಂತೆ ಎಚ್ಚರಿಕೆ ವಹಿಸಬೇಕೆಂದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications