ನ.16ಕ್ಕೆ ಸ್ಪೀಕರ್ ಸ್ಥಾನಕ್ಕೆ ಶೆಟ್ಟರ್ ರಾಜೀನಾಮೆ

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪಕ್ಷದ ವರಿಷ್ಠರ ಸೂಚನೆ ಮೇರೆಗೆ ಬದಲಾವಣೆ ಮಾಡಲು ನಿರ್ಧರಿಸಲಾಗಿದೆ ಎಂದರು. ಜಗದೀಶ್ ಶೆಟ್ಟರ್ ಅವರು ಯಾವ ಖಾತೆ ವಹಿಸಿಕೊಳ್ಳಬೇಕು ಎನ್ನುವ ಬಗ್ಗೆ ಇನ್ನೂ ತೀರ್ಮಾನಿಸಿಲ್ಲ. ಅವರಿಗೆ ಯಾವ ಖಾತೆಯನ್ನು ನೀಡಬೇಕು ಎಂಬ ನಿರ್ಧಾರವನ್ನು ಹೈಕಮಾಂಡ್ ತಿಳಿಸಲಿದೆ ಎಂದು ಹೇಳಿದರು.
ಶೆಟ್ಟರ್ ಅವರಿಗೆ ಲೋಕೋಪಯೋಗಿ ಅಥವಾ ಶೋಭಾ ಕರಂದ್ಲಾಜೆ ರಾಜೀನಾಮೆಯಿಂದ ಖಾಲಿಯಾಗಿರುವ ಗ್ರಾಮೀಣಾಭಿವೃದ್ಧಿ ಖಾತೆಯನ್ನು ವಹಿಸಿಕೊಳ್ಳಲಿದ್ದಾರೆ. ಲೋಕೋಪಯೋಗಿ ಸಚಿವರಾಗಿರುವ ಸಿ ಎಂ ಉದಾಸಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ಪೀಕರ್ ಆಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications