ನಿತಿನ್ ಗಡಕರಿ ಬಿಜೆಪಿ ರಾಷ್ಟ್ರಾಧ್ಯಕ್ಷ?

ಕಳೆದ ಎರಡು ದಿನಗಳಿಂದ ನವದೆಹಲಿಯಲ್ಲಿ ಬೀಡುಬಿಟ್ಟಿರುವ ಗಡಕಾರಿ ಅವರು, ಪಕ್ಷದ ಹಿರಿಯ ನಾಯಕರನ್ನು ಮುಖಂಡರನ್ನು ಬೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಗಡಕರಿ ಅವರು ಮೂಲ ಬಿಜೆಪಿ ನಾಯಕರು, ಸಂಘ ಪರಿವಾರ ಅಂಗ ಸಂಘಟನೆ ಎಬಿವಿಪಿಯ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ಇಂದು ಅಥವಾ ನಾಳೆ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಭೇಟಿ ಮಾಡಿ ಚರ್ಚಿಸುವ ಸಾಧ್ಯತೆ ಇದೆ.
ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ನಿತಿನ್ ಗಡಕರಿ, ಹಿರಿಯ ನಾಯಕರ ಆದೇಶದ ಮೇರೆಗೆ ದೆಹಲಿಯಲ್ಲಿ ಬೀಡುಬಿಟ್ಟಿರುವೆ. ಈ ಬಗ್ಗೆ ನನನಗೇನೂ ಗೊತ್ತಿಲ್ಲ. ಆದರೆ, ನನ್ನ ಮೇಲೆ ನಂಬಿಕೆ ಇಟ್ಟು ಪಕ್ಷ ಎಂತಹ ಜವಾಬ್ದಾರಿ ವಹಿಸಿದರೂ ಪಕ್ಷದ ಏಳೆಗೆಗಾಗಿ ದುಡಿಯುವುದಾಗಿ ಅವರು ಹೇಳಿದರು. ಪಕ್ಷದ ಅಧ್ಯಕ್ಷ ಗಾದಿಗೆ ಸುಷ್ಮಾ ಸ್ವರಾಜ್, ಅರುಣ್ ಜೈಟ್ಲಿ ಅವರ ಹೆಸರುಗಳು ಕೇಳಿಬರುತ್ತಿವೆ. ರಾಜನಾಥ್ ಸಿಂಗ್ ಅವರ ಅಧಿಕಾರ ಅವಧಿ ಡಿಸೆಂಬರ್ ತಿಂಗಳಿಗೆ ಕೊನೆಗೊಳ್ಳಲಿದೆ.
(ಏಜನ್ಸೀಸ್)












Click it and Unblock the Notifications