ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಟ್ಕಳ ಪ್ರಕ್ಷುಬ್ಧ; ನಿಷೇಧಾಜ್ಞೆ ಜಾರಿ

|
Google Oneindia Kannada News

ಭಟ್ಕಳ, ನ.15: ಜಾನುವಾರು ಸಾಗಿಸುತ್ತಿದ್ದ ನಾಲ್ವರ ಮೇಲೆ ಹಲ್ಲೆ ನಡೆಸಿದ ಬಜರಂಗ ದಳ ಕಾರ್ಯಕರ್ತರನ್ನು ಬಂಧಿಸುವಂತೆ ಆಗ್ರಹಿಸಿ 500ಕ್ಕೂ ಹೆಚ್ಚು ಮಂದಿ ಶನಿವಾರ ಭಟ್ಕಳ ನಗರ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಬಕ್ರೀದ್ ಹಬ್ಬಕ್ಕಾಗಿ ಹುಬ್ಬಳ್ಳಿಯಿಂದ ಭಟ್ಕಳಕ್ಕೆ ಜಾನುವಾರುಗಳನ್ನು ಸಾಗಿಸುತ್ತಿದ್ದವ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಪ್ರತಿಭಟಿಸಲಾಯಿತು.

ಭಟ್ಕಳದಲ್ಲಿ ಮುಂಜಾಗ್ರತಾ ಕ್ರಮವಾಗಿ ಶನಿವಾರದಿಂದ ಎರಡು ದಿನಗಳ ಕಾಲ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಆಯಕಟ್ಟಿನ ಜಾಗಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಾಟು ಮಾಡಲಾಗಿದೆ. ಉದ್ರಿಕ್ತ ಗುಂಪೊಂದು ಮೂವರು ಪೊಲೀಸರ ಮೇಲೆ ಹಲ್ಲೆ ನಡೆಸಿತು.

ಪೊಲೀಸರು ಛಾಯಾಗ್ರಾಹಕನೊಬ್ಬನ ಕ್ಯಾಮೆರಾ ಕಿತ್ತುಕೊಂಡು ಹಲ್ಲೆ ನಡೆಸಿದ ಘಟನೆಯೂ ನಡೆಯಿತು. ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆದು ಪಟ್ಟಣದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಯಿತು. ಉದ್ರಿಕ್ತ ಗುಂಪನ್ನು ಚದುರಿಸಲು ಪೊಲೀಸರು ಹರಸಾಹಸ ಮಾಡಬೇಕಾಯಿತು. ಘಟನೆಯಲ್ಲಿ ಮೂವರು ಪೊಲೀಸರು ಗಾಯಗೊಂಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X