ಶೆಟ್ಟರ್ ರಾಜಕೀಯ ಜೀವನದಲ್ಲಿ ಹೊಸ ಇನ್ನಿಂಗ್ಸ್

ಮಂಗಳವಾರ ಬೆಳಗ್ಗೆ 11.30ಕ್ಕೆ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ ಶೆಟ್ಟರ್ ಸಚಿವರಾಗಿ ಪ್ರಮಾಣ ಸ್ವೀಕರಿಸುವರು. ಮುಖ್ಯಮಂತ್ರಿ ಯಡಿಯೂರಪ್ಪ ಸಚಿವ ಸಂಪುಟದ ಪ್ರಮುಖರು ಪಾಲ್ಗೊಳ್ಳಲಿದ್ದಾರೆ. ಉಳಿದಂತೆ ಸಚಿವ ಸಂಪುಟಕ್ಕೆ ಇತರರನ್ನು ಸೇರಿಸಿಕೊಳ್ಳುವ ಬಗ್ಗೆ ಯಾವುದೇ ತೀರ್ಮಾನವಾಗಿಲ್ಲ ಎಂದು ಯಡಿಯೂರಪ್ಪ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಶೆಟ್ಟರ್ ಅವರು ಸಚಿವರಾಗಿ ರಾಜಕೀಯ ಜೀವನದಲ್ಲಿ ಹೊಸ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಲೋಕೋಪಯೋಗಿ ಅಥವಾ ಗಣಿ ಮತ್ತು ಅರಣ್ಯ ಖಾತೆ ಸಿಗುವ ಸಾಧ್ಯತೆ ಇದೆ. ಶೋಭಾ ಕರಂದ್ಲಾಜೆ ರಾಜೀನಾಮೆಯಿಂದ ತೆರವಾಗಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆಯನ್ನು ಶೆಟ್ಟರ್ ಗೆ ನೀಡಲು ಉದ್ದೇಶಿಸಲಾಗಿತ್ತು. ಆದರೆ ಶೆಟ್ಟರ್ ಈ ಖಾತೆಯನ್ನು ಒಲ್ಲೆ ಎಂದಿದ್ದಾರೆ ಎನ್ನಲಾಗಿದೆ. ಗ್ರಾಮೀಣಾಭಿವೃದ್ದ್ಧಿ ಖಾತೆ ಸದ್ಯಕ್ಕೆ ಸಿಎಂ ಉದಾಸಿ ಅವರ ಹೆಗಲಿಗೆ ಬೀಳಲಿದೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications