ರೆಡ್ಡಿಗಳ ಗೆಲುವು, ಮತದಾರರನ ಸೋಲು:ಸಿದ್ದು

Siddaramaiah
ಮೈಸೂರು, ನ.17: ದಿನನಿತ್ಯ ಕೋಟಿಗಟ್ಟಲೆ ಹಣ ಲೂಟಿಮಾಡುವ ಗಣಿ ಧಣಿಗಳನ್ನು ವಿಧಾನಸಭೆಗೆ ಆಯ್ಕೆ ಮಾಡುವ ಮೂಲಕ ಜನತೆ ತಪ್ಪು ಮಾಡಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕಸಿದ್ದರಾಮಯ್ಯ ವಿಷಾದಿಸಿದರು. ತಿ.ನರಸೀಪುರ ತಾಲೂಕಿನ ಮುಸುವಿಕೊಪ್ಪಲು ಗ್ರಾಮದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಬಾರ್ಡ್ ಯೋಜನೆಯಡಿ 15.84 ಲಕ್ಷ ರು. ವೆಚ್ಚದಲ್ಲಿ ಕೊಠಡಿಗಳ ಕಾಮಗಾರಿಗೆ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು.

ಸ್ವಾರ್ಥಕ್ಕಾಗಿ ರೆಡ್ಡಿಗಳು ಸೃಷ್ಟಿಸಿದ ಬಿಕ್ಕಟ್ಟಿನಿಂದ ಶಿಸ್ತಿನ ಪಕ್ಷವಾಗಿದ್ದ ಬಿಜೆಪಿ ಈಗ ಬಣಗಳಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರ ಉಳಿಸಿಕೊಂಡು ಅಧಿಕಾರದಲ್ಲಿ ಮುಂದುವರೆಯಲು ಸರ್ಕಸ್ ಮಾಡುತ್ತಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಸಂಪನ್ಮೂಲ ಕ್ರೋಢಿಕರಿಸಲು ಸರ್ಕಾರ ವಿಫಲವಾಗಿದೆ. ಇಂಧನ ಸಚಿವರು ಹಾಗೂ ಮುಖ್ಯಮಂತ್ರಿ ನಡುವೆ ಹೊಂದಾಣಿಕೆ ಇಲ್ಲದೆ ಇರುವುದರಿಂದ ಗ್ರಾಮೀಣ ಪ್ರದೇಶಗಳು ಕತ್ತಲಲ್ಲಿ ಇದೆ ಎಂದು ದೂರಿದರು.

ಗ್ರಾಮೀಣ ಪ್ರದೇಶಗಳಿಗೆ ಕನಿಷ್ಠ ಎರಡು ತಾಸು ವಿದ್ಯುತ್ ನೀಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಗಣಿ ಧಣಿಗಳನ್ನು ಆಯ್ಕೆ ಮಾಡಿರುವುದರಿಂದ ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿ ಆಗಿಲ್ಲ. ಮುಂದಾದರೂ ಜನತೆ ಸರಿಯಾದ ವ್ಯಕ್ತಿಗಳನ್ನು ಆಯ್ಕೆ ಮಾಡಬೇಕು ಎಂದು ತಿಳಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+