ಹುಮ್ನಾಬಾದ್ ನಲ್ಲಿ ಚರ್ಚ್ ಮೇಲೆ ದಾಳಿ

ಘಟನೆ ತಿಳಿಯುತ್ತಿದ್ದಂತೆಯೇ ಕ್ರೈಸ್ತ ಸಮುದಾಯದ ಮಂದಿ ಚರ್ಚ್ ಬಳಿ ಜಮಾಯಿಸಿ ಪ್ರತಿಭಟನೆ ಆರಂಭಿಸಿದ್ದರಿಂದ ಕೆಲ ಕಾಲ ಉದ್ವಿಗ್ನ ವಾತಾವರಣ ಉಂಟಾಯಿತು. ಘಟನೆ ಬಗ್ಗೆ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಲು ಯತ್ನಿಸಿದಾದರೂ ಪ್ರತಿಭಟನಾಕಾರರನ್ನು ಹತೋಟಿಗೆ ತರಲಾಗಿಲ್ಲ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸತೀಶ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ.
ಕೃತ್ಯ ನಡೆಸಿದ ಆರೋಪಿಗಳ ಬಂಧನಕ್ಕೆ ಪೊಲೀಸರು ವ್ಯಾಪಕ ಜಾಲ ಬೀಸಿದ್ದಾರೆ. ಘಟನೆಗೆ ಸ್ಪಷ್ಟ ಕಾರಣಗಳು ತಿಳಿದು ಬಂದಿಲ್ಲ. ಆದರೆ, ಏಸು ಮೂರ್ತಿ ಸಂಪೂರ್ಣವಾಗಿ ಭಗ್ನಗೊಂಡಿದೆ. ಪೀಠೋಪಕರಣಗಳು ಧ್ವಂಸವಾಗಿವೆ. ಕಳ್ಳತನಕ್ಕಂತೂ ಮಾಡಿದ ಘಟನೆ ಇದಲ್ಲ. ಉದ್ದೇಶ ಪೂರ್ವಕವಾಗಿ ಚರ್ಚ್ ಮೇಲೆ ದಾಳಿ ನಡೆಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications