ಓಎಂಸಿ ಗಣಿಗಾರಿಕೆಯನ್ನು ಸಿಬಿಐಗೆ ವಹಿಸಿ, ಸಿದ್ದು
ಬೆಂಗಳೂರು,
ನ. 18 : ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮಗಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರಕಾರ ಪ್ರಕರಣವನ್ನು ತನಿಖೆಗೆ ವಹಿಸಿದೆ ರಾಜ್ಯಕ್ಕೂ ಕೂಡಾ ಇದರಿಂದ ಭಾರಿ ಅನ್ಯಾಯವಾಗಿದೆ. ಆದ್ದರಿಂದ ಈ ಕೂಡಲೇ ಓಎಂಸಿ ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸರಕಾರವನ್ನು ಆಗ್ರಹಿಸಿದ್ದಾರೆ. id="toptextpromo">ಮಾಧ್ಯಮ
ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಸಾಧ್ಯವಾಗದಿದ್ದರೆ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದ ನೈಸರ್ಗಿಕ ಸಂಪತ್ತು ಲೂಟಿಯಾಗುತ್ತಿದೆ ಎಂದು ಬಹಿರಂಗ ಹೇಳಿಕೆ ನೀಡಿರುವ ಯಡಿಯೂರಪ್ಪ, ಅಧಿಕಾರದ ಆಸೆಗಾಗಿ ರೆಡ್ಡಿ ಸಹೋದರರಿಗೆ ರಕ್ಷಣೆ ನೀಡುತ್ತಿದ್ದಾರೆ. ರೆಡ್ಡಿ ಸಹೋದರರು ಸಂಪುಟದಲ್ಲಿ ಇರುವ ತನಕ ಅಕ್ರಮ ಗಣಿಗಾರಿಕೆ ನಿಲ್ಲಸಲು ಸಾಧ್ಯವಿಲ್ಲ. ರೆಡ್ಡಿಗಳನ್ನು ಸಂಪುಟದಿಂದ ಕೈಬಿಡಿ ಇಲ್ಲವೇ ನೀವೇ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಿರಿ ಎಂದು ಕಿಡಿಕಾರಿದರು. id='are-slot-1' class='oiad oi-axt oiadv'> id='top-searched-articles'>(ದಟ್ಸ್
ಕನ್ನಡ ವಾರ್ತೆ)











Click it and Unblock the Notifications