ಸಹಕಾರಿ ಕ್ಷೇತ್ರಕ್ಕೆ ಕಾಯಕಲ್ಪ, ಖರ್ಗೆ

ಬೆಂಗಳೂರು, ನ. 19 : ಸಚಿವ ಜನಾರ್ದನರೆಡ್ಡಿ ಒಡೆತನದ ಒಬಳಾಪುರಂ ಮೈನಿಂಗ್ ಕಂಪನಿ ಅಕ್ರಮಗಳ ತನಿಖೆಯನ್ನು ಸಿಬಿಐ ಒಪ್ಪಿಸಿರುವುದನ್ನು ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಸ್ವಾಗತಿಸಿದ್ದಾರೆ. ರಾಜ್ಯ ಸರಕಾರ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ರಾಜ್ಯ ಸಹಕಾರಿ ವಸತಿ ಮಹಾಮಂಡಲವು ನಗರದ ಬಸವನಗುಡಿಯಲ್ಲಿ ನೂತನವಾಗಿ ನಿರ್ಮಿಸಿರುವ ಸಹಕಾರಿ ವಸತಿ ಭವನವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಸಹಕಾರಿ ಕ್ಷೇತ್ರದಲ್ಲಿ ಸರಕಾರದ ಹಸ್ತಕ್ಷೇಪಕ್ಕೆ ಕಡಿವಾಣ ಹಾಕುವ ದೃಷ್ಟಿಯಿಂದ ಕೇಂದ್ರ ಸರಕಾರ ಶೀಘ್ರದಲ್ಲಿಯೇ ಕಾನೂನಿಗೆ ತಿದ್ದುಪಡಿ ತರಲಿದೆ ಎಂದು ಖರ್ಗೆ ತಿಳಿಸಿದರು.

ಸಹಕಾರಿ ವಸತಿ ಮಹಾಮಂಡಲವು ಸರಕಾರ ಸೇರಿದಂತೆ ಯಾವುದೇ ಸಂಸ್ಥೆಯ ನಿಯಂತ್ರಣಕ್ಕೆ ಒಳಗಾಗದೇ ಸ್ವತಂತ್ರವಾಗಿ ಕಾರ್ಯ ರ್ವಹಿಸುವಂತೆ ಮಾಡುವ ಸಲುವಾಗಿ ಕಾನೂನಿಗೆ ತಿದ್ದುಪಡಿ ತರಲಾಗುತ್ತಿದೆ. ಇದರಿಂದ ಸಹಕಾರಿ ಸಂಸ್ಥೆಗಳ ಕಾರ್ಯ ನಿರ್ವಹಣೆ ಸುಗಮವಾಗಲಿದೆ ಎಂದು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+