ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೆಜೆಸ್ಟಿಕ್ ಬಸ್ ನಿಲ್ದಾಣ ಬಂದ್; ಅಶೋಕ್

By Staff
|
Google Oneindia Kannada News

Transport minister R Ashok
ಬೆಂಗಳೂರು, ನ. 20 : ಏಷ್ಯಾದಲ್ಲೇ ಸಮೂಹ ಸಾರಿಗೆಯ ಅತಿ ದೊಡ್ಡ ಬಸ್ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕೆಂಪೇಗೌಡ ಬಸ್ ನಿಲ್ದಾಣವನ್ನು ನವೆಂಬರ್ ಅಂತ್ಯದೊಳಗೆ ಮುಚ್ಚಲು ಸರಕಾರ ನಿರ್ಧರಿಸಿದೆ. ಇಲ್ಲಿಂದ ಕಾರ್ಯನಿರ್ವಹಿಸುತ್ತಿದ್ದ ಬಸ್ ಗಳನ್ನೂ ನಗರದ ನಾಲ್ಕು ದಿಕ್ಕಿನಲ್ಲಿ ತಾತ್ಕಾಲಿಕವಾಗಿ ನಿರ್ಮಿಸುತ್ತಿರುವ ನಿಲ್ದಾಣಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಆದರೆ, ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಯಾವುದೇ ತೊಂದರೆ ಇರುವುದಿಲ್ಲ. ಮೆಟ್ರೋ ಕಾಮಗಾರಿಗಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಾರಿಗೆ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.

ಕೆಂಪೇಗೌಡ ಬಸ್ ನಿಲ್ದಾಣ 35 ಎಕರೆ ಪ್ರದೇಶದಲ್ಲಿದ್ದು ಇದರಲ್ಲಿ ಮೆಟ್ರೋ ಕಾಮಗಾರಿಗಾಗಿ 20ಎಕರೆ ಬಿಟ್ಟು ಕೊಡಲಾಗುತ್ತಿದೆ. ಅದರಲ್ಲಿ 7ಎಕರೆಯನ್ನು ಮೆಟ್ರೋ ಬಳಸಿಕೊಳ್ಳಲಿದೆ. ಮೆಟ್ರೋ ಕಾಮಗಾರಿ ಮುಗಿದ ನಂತರ ವಿಭಿನ್ನ ವಿನ್ಯಾಸದ ಅಂತಾರಾಷ್ಟ್ರೀಯ ಗುಣಮಟ್ಟದ ಬಸ್ ನಿಲ್ದಾಣ ನಿರ್ಮಿಸಲಾಗುವುದು. ಬಸ್ ಗಳ ಮಾರ್ಗಕ್ಕನುಗುಣವಾಗಿ ಶಾಂತಿನಗರ ನಿಲ್ದಾಣ, ಬಾಳೇಕಾಯಿ ಮಂಡಿ, ಹೆಬ್ಬಾಳ ಮತ್ತು ಪೀಣ್ಯದಲ್ಲಿ ತಾತ್ಕಾಲಿಕ ಬಸ್ ನಿಲ್ದಾಣ ನಿರ್ಮಿಸಿ ಸ್ಥಳಾಂತರಿಸಲಾಗುವುದು ಎಂದು ಸಾರಿಗೆ ಸಚಿವರು ತಿಳಿಸಿದ್ದಾರೆ.

ಕೆಂಪೇಗೌಡ ಬಸ್ ನಿಲ್ದಾಣ ಸ್ಥಳಾಂತರಗೊಳ್ಳುವ ಮೊದಲು ಸಾರ್ವಜನಿಕರಿಗೆ ಎಲ್ಲಾ ಮಾಹಿತಿ ನೀಡಲಾಗುತ್ತದೆ ಮತ್ತು ಪತ್ರಿಕೆಗಳಲ್ಲೂ ಜಾಹೀರಾತು ನೀಡಲಾಗುತ್ತದೆ. ತಾತ್ಕಾಲಿಕ ಬಸ್ ನಿಲ್ದಾಣಗಳಿಂದ ನಗರದ ಎಲ್ಲಾ ಬಡಾವಣೆಗಳಿಗೂ ಬಿಎಂಟಿಸಿ ಸಂಪರ್ಕ ಕಲ್ಪಿಸಲಾಗುವುದು ಎಂದರು. ನವೆಂಬರ್ 24ರಂದು ವಿಧಾನಸೌಧದ ಬಳಿ ಹಸಿರು ಆಟೋ ಸಂಚಾರಕ್ಕೆ ಚಾಲನೆ ನೀಡಲಾಗುವುದು ಮತ್ತು ಮುಂದೆ ಕಾರ್ಖಾನೆಗಳಿಂದ ಬರುವ ಆಟೋಗಳು ಹಸಿರು ಬಣ್ಣದಲ್ಲಿರುತ್ತದೆ ಎಂದು ಅಶೋಕ್ ಹೇಳಿಕೆ ನೀಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X