ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪುಣ್ಯಕ್ಷೇತ್ರಗಳ ಅಭಿವೃದ್ಧಿಗೆ ಹಣಕೊರತೆಯಿಲ್ಲ

By Staff
|
Google Oneindia Kannada News

BS Yeddyurappa in Babala, Gulbarga
ಗುಲಬರ್ಗಾ, ನ.21 : ಗುಲಬರ್ಗಾ ತಾಲೂಕಿನ ಮುತ್ಯಾನ ಬಬಲಾದ ಸುಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹಂತ ಹಂತವಾಗಿ ಅಗತ್ಯ ನೆರವು ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಘೋಷಿಸಿದ್ದಾರೆ. ಮುತ್ಯಾನ ಬಬಲಾದ ವಿರಕ್ತ ಮಠದಲ್ಲಿ ಶ್ರೀ ಲಿಂಗೈಕ್ಯ ಗುರು ಚನ್ನವೀರ ಮಹಾಶಿವಯೋಗಿಗಳ 25ನೇ ಪುಣ್ಯಸ್ಮರಣೆಯ ರಜತ ಮಹೋತ್ಸವದ ಅಂಗವಾಗಿ ಗುರುಪಾದಲಿಂಗ ಶಿವಯೋಗಿಗಳ ನೇತೃತ್ವದಲ್ಲಿ ಆಯೋಜಿಸಿದ್ದ ಲಕ್ಷದೀಪೋತ್ಸವ ಕಾರ್ಯಕ್ರಮಕ್ಕೆ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಮಠ ಮಂದಿರಗಳು, ಪುಣ್ಯ ಕ್ಷೇತ್ರಗಳ ಅಭಿವೃದ್ಧಿಗೆ ನಮ್ಮಲ್ಲಿ ಹಣಕಾಸಿನ ಕೊರತೆ ಇಲ್ಲ. ಅನ್ನ ದಾಸೋಹಕ್ಕೆ ಹೆಸರಾದ ಶ್ರೀಮಠದ ಅಭಿವೃದ್ಧಿಗಾಗಿ ಅಗತ್ಯವಾದ ನೆರವು ನೀಡುವುದಾಗಿ ಅವರು ಹೇಳಿದರು. ಗುರು ಚನ್ನವೀರ ಶ್ರೀಯವರು ಶಾಲೆಗಳನ್ನು ತೆರೆದು ಈ ಭಾಗದಲ್ಲಿ ಶಿಕ್ಷಣದ ಪ್ರಗತಿಗೆ ಶ್ರಮಿಸಿದ್ದಾರೆ. ಇಂಥ ಕೈಂಕರ್ಯ ಶ್ರೀ ಗುರುಪಾದಲಿಂಗ ಶಿವಯೋಗಿಗಳ ಮಾರ್ಗದರ್ಶನದಲ್ಲಿ ನಡೆಯುತ್ತಿರುವುದು ಸಂತಸ ತಂದಿದೆ ಎಂದ ಯಡ್ಡಿ, ನಾಡಿನ ಅಭಿವೃದ್ಧಿಗಾಗಿ ಶಕ್ತಿ ದಯಪಾಲಿಸುವಂತೆ ಶ್ರೀಗಳ ಆಶೀರ್ವಾದ ಕೇಳಿದರು.

ಇದಕ್ಕೂ ಮುನ್ನ ಜೇವರ್ಗಿ ತಾಲೂಕಿನ ಕೂಡಿ ದರ್ಗಾದಲ್ಲಿ ನೆರೆ ಸಂತ್ರಸ್ತರಿಗಾಗಿ ಪುನರ್ವಸತಿ ನಿರ್ಮಾಣಕ್ಕಾಗಿ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿಯವರು, ಜೇವರ್ಗಿಯ ಮಹಾಲಕ್ಷ್ಮಿ ದೇವಾಲಯದ ಅಭಿವೃದ್ಧಿಗೆ 50 ಲಕ್ಷ ರೂ. ನೆರವು ನೀಡುವುದಾಗಿ ಘೋಷಿಸಿದರು.

ಯಡಿಯೂರು ತೊಂಟದಾರ್ಯ ಸಂಸ್ಥಾನಮಠದ ಶ್ರೀ ಜಗದ್ಗುರು ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳು ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದರು. ಶಿವಯೋಗಿ ಆಶ್ರಮದ ಶ್ರೀ ರೇವಣಸಿದ್ದ ಮಹಾಸ್ವಾಮಿಗಳು, ಹಾರಕೂಡ ಸಂಸ್ಥಾನದ ಶ್ರೀ ಚನ್ನವೀರ ಶಿವಾಚಾರ್ಯರು, ಸುಲಫಲ ಮಠದ ಶ್ರೀ ಮಹಾಂತ ಶಿವಾಚಾರ್ಯರು, ಚವದಾಪೂರಿ ಹಿರೇಮಠದ ಶ್ರೀ ರಾಜಶೇಖರ ಶಿವಾಚಾರ್ಯರು, ಸಚಿವರಾದ ಲಕ್ಷ್ಮಣ ಸವದಿ, ರೇವುನಾಯಕ್ ಬೆಳಮಗಿ, ಡಾ|| ನಂಜುಂಡಪ್ಪ ವರದಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಶೀಲ್ ನಮೋಶಿ, ಹೆಚ್‌ಕೆಡಿಬಿ ಅಧ್ಯಕ್ಷ ಅಮರನಾಥ್ ಪಾಟೀಲ್, ಎಂಎಸ್‌ಐಎಲ್ ಅಧ್ಯಕ್ಷ ಡಾ|| ವಿಕ್ರಂ ಪಾಟೀಲ್, ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X