ಮೋಹನ್ ಭಾಗವತ್ ರೊಂದಿಗೆ ಸಿಎಂ ಚರ್ಚೆ

ಒಂದು ತಾಸಿಗೂ ಹೆಚ್ಚು ಹೊತ್ತು ನಡೆದ ಮಾತುಕತೆಯಲ್ಲಿ ಪಕ್ಷದಲ್ಲಿ ಉಂಟಾಗಿರುವ ಬಿಕ್ಕಟ್ಟಿನಿಂದ ಇಕ್ಕಟ್ಟಿಗೆ ಸಿಲುಕಿರುವ ಯಡಿಯೂರಪ್ಪನವರು ಪರಿಹಾರ ಕುರಿತು ಭಾಗವತ್ ಅವರಿಂದ ಸಲಹೆಗಳನ್ನು ಪಡೆದುಕೊಂಡರು. ರಾಜನೀತಿ ಪಾಲನೆ, ಪಕ್ಷ ಮತ್ತು ಸರಕಾರದಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ಭಾಗವತ್ ನೀತಿ ಪಾಠ ಹೇಳಿದರು. ಆರ್ಎಸ್ಎಸ್ ಕೃಪೆಯಿಂದಲೇ ತಮ್ಮ ಸೀಟು ಉಳಿಸಿಕೊಂಡಿರುವ ಯಡಿಯೂರಪ್ಪ ಅವರು ಅದಕ್ಕಾಗಿ ಭಾಗವತ್ ಅವರಿಗೆ ಕೃತಜ್ಞತೆ ಸಲ್ಲಿಸಿದರು.
ಸಂಜೆ ಚಾಮರಾಜಪೇಟೆಯ ಕೇಶವಶಿಲ್ಪದಲ್ಲಿ ಪೇಜಾವರ ಮಠ ವಿಶ್ವೇಶ್ವರ ತೀರ್ಥ ಸ್ವಾಮೀಜಿ, ರಾಮಚಂದ್ರಾಪುರಮಠದ ರಾಘವೇಶ್ವರ ಸ್ವಾಮೀಜಿ ಅವರನ್ನು ಭೇಟಿ ಮಾಡಿ ರಾಷ್ಟ್ರೀಯತೆ, ಹಿಂದುತ್ವ, ಧರ್ಮ, ಸಂಸ್ಕೃತಿ ರಕ್ಷಣೆ ಸೇರಿದಂತೆ ಅನೇಕ ವಿಷಯಗಳ ಚರ್ಚಿಸಿದರು. ನಂತರ ಸಂಘ ಪರಿವಾರದ ಅಂಗ ಸಂಸ್ಥೆಗಳ ಪ್ರಮುಖರೊಂದಿಗೆ ಭಾಗವತ್ ಸಮಾಲೋಚಿಸಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications