ಬಾಬ್ರಿ ಧ್ವಂಸ : ಅಡ್ವಾಣಿ, ಅಟಲ್ ಆರೋಪಿಗಳು

1992 ಡಿಸೆಂಬರ್ 5 ರಂದು ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಸಮಗ್ರ ವರದಿಯನ್ನು 17 ವರ್ಷಗಳ ನಂತರ ಕಳೆದ ಜೂನ್ ತಿಂಗಳಲ್ಲಿ ನ್ಯಾಯಮೂರ್ತಿ ಎಂಎಸ್ ಲಿಬರ್ಹಾನ್ ಸಮಿತಿ ಸರಕಾರಕ್ಕೆ ವರದಿ ಸಲ್ಲಿಸಿದೆ. ಈ ವರದಿಯಲ್ಲಿ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಪ್ರತಿಪಕ್ಷದ ನಾಯಕ ಎಲ್ ಕೆ ಅಡ್ವಾಣಿ ಮತ್ತು ಮುರಳಿ ಮನೋಹರ ಜೋಶಿ ಅವರು ಬಾಬ್ರಿ ಧ್ವಂಸ ಮಾಡುವುದು ಮುಂಚೆ ತಿಳಿದಿತ್ತು. ಬಾಬ್ರಿ ಧ್ವಂಸ ಪ್ರಕರಣ ಪೂರ್ವ ನಿಯೋಜಿತ ಕೃತ್ಯ ಎನ್ನುವುದು ವರದಿಯಲ್ಲಿದೆ ಎಂದು ರಾಷ್ಟ್ರೀಯ ಇಂಗ್ಲಿಷ್ ದೈನಿಕವೊಂದು ವರದಿ ಮಾಡಿರುವುದು ರಾಷ್ಟ್ರ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.
ಈ ಕುರಿತು ನನ್ನನ್ನೇನೂ ಕೇಳಬೇಡಿ. ನಾನು ನಿಮ್ಮ ಯಾವ ಪ್ರಶ್ನೆಗೂ ಉತ್ತರಿಸಲು ಸಿದ್ಧನಿಲ್ಲ. ವರದಿಯನ್ನು ಸರಕಾರಕ್ಕೆ ಸಲ್ಲಿಸಲಾಗಿದೆ. ನನ್ನ ಕೆಲಸ ಮುಗಿದಿದೆ ಎನ್ನುವುದು ನ್ಯಾಯಮೂರ್ತಿ ಲಿಬರ್ಹಾನ್ ಅವರ ಖಡಕ್ ಮಾತುಗಳು. ಚಳಗಾಲದ ಅಧಿವೇಶನ ನಡೆಯುತ್ತಿದ್ದು, ಇದೇ ವಿಷಯಕ್ಕೆ ಸಂಬಂಧಿಸಿದಂತೆ ಇಂದು ಲೋಕಸಭೆ ಸಭೆಯಲ್ಲಿ ಭಾರಿ ಗದ್ದಲ ಉಂಟಾಗಿದೆ. ಆಡಳಿತರೂಢ ಕಾಂಗ್ರೆಸ್ ಪಕ್ಷ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸುವ ಸಾಧ್ಯತೆಗಳಿವೆ.
(ಏಜನ್ಸೀಸ್)












Click it and Unblock the Notifications