ಅಕ್ರಮ ಗಣಿಗಾರಿಕೆ ಬಗ್ಗೆ ಸಿಎಂ ರಹಸ್ಯ ಚರ್ಚೆ

Yeddyurappa secret meeting with forest officers
ಬೆಂಗಳೂರು, ನ. 23 : ರಾಜ್ಯದಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆ ಮುಂದೆ ಪಡೆಯಬಹುದಾದ ತಿರುವುಗಳ ಸಂದರ್ಭದಲ್ಲಿ ಸರಕಾರ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅರಣ್ಯ ಮತ್ತು ಗಣಿ ಇಲಾಖೆಯ ಅಧಿಕಾರಿಗಳ ಜೊತೆ ರಹಸ್ಯ ಸಭೆ ನಡೆಸಿದ್ದಾರೆ. ಅರಣ್ಯ ಇಲಾಖೆಗೆ ಸೇರಿದ ಅತಿಥಿಗೃಹದಲ್ಲಿ ಕೆಲವೇ ಹಿರಿಯ ಅಧಿಕಾರಿಗಳ ಜೊತೆಯಲ್ಲಿ ಈ ಸಭೆ ನಡೆದಿದೆ.

ಪ್ರಕರಣವನ್ನು ಆಂಧ್ರಪ್ರದೇಶ ಸರಕಾರ ಸಿಬಿಐ ತನಿಖೆಗೆ ವಹಿಸಿದೆ. ಸುಪ್ರಿಂಕೋರ್ಟ್ ನ ಉನ್ನತಾಧಿಕಾರ ಸಮಿತಿ ಸಹ ಸಚಿವ ಜನಾರ್ದನರೆಡ್ಡಿಗೆ ಸೇರಿದ ಓಬಳಾಪುರಂ ಮೈನ್ಸ್ ಗಣಿಗಾರಿಕೆ ನಿಲ್ಲಿಸುವ ಶಿಫಾರಸ್ಸು ಮಾಡಿದೆ. ಸುಪ್ರಿಂಕೋರ್ಟ್ ಈ ನಿಟ್ಟಿನಲ್ಲಿ ನೀಡಬಹುದಾದ ಸೂಚನೆಗಳನ್ನು ಯಾವ ರೀತಿ ಪಾಲಿಸಬೇಕಾಗುತ್ತದೆ ಎಂಬ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ ಎಂದು ಹೇಳಲಾಗಿದೆ.

ಆಂಧ್ರಪ್ರದೇಶ ಸರಕಾರದ ಶಿಫಾರಸ್ಸಿನಂತೆ ಕೇಂದ್ರ ಸರಕಾರ ಸಿಬಿಐಗೆ ವಹಿಸಿದಾಗ ನಮ್ಮ ಸರಕಾರ ಸಹ ರಾಜ್ಯದಲ್ಲಿ ತನಿಖೆ ನಡೆಸಲು ಅನುಮತಿ ನಡೆಸಬೇಕೆ ಅಥವಾ ಬೇಡವೇ ಎಂಬ ಬಗ್ಗೆಯೂ ಚರ್ಚೆ ನಡೆಸಲಾಗಿದೆ. ಇಂತಹ ಸಂದರ್ಭದಲ್ಲಿ ಅನುಮತಿ ನೀಡಬೇಕಾಗುತ್ತದೆ ಎಂಬ ಅಭಿಪ್ರಾಯವನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆಂದು ಹೇಳಲಾಗಿದೆ. ಒಟ್ಟಿನಲ್ಲಿ ಬಿಕ್ಕಟ್ಟಿನಿಂದ ಶಮನಗೊಳಿಸಿ ಕುರ್ಚಿ ಉಳಿಸಿಕೊಂಡಿದ್ದ ಯಡಿಯೂರಪ್ಪ ಅವರಿಗೆ ಮತ್ತೊಂದು ಪೀಕಲಾಟ ಎದುರಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+