ಲೋಡ್ ಶೆಡ್ಡಿಂಗ್ ವಾಪಸ್ಸಿಲ್ಲ, ಈಶ್ವರಪ್ಪ

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಪರೀಕ್ಷೆ ವೇಳೆ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಲಾಗುವುದು ಎಂದರು. ಗ್ರಾಮಾಂತರ ಪ್ರದೇಶದಲ್ಲಿ ತಲಾ 6 ಗಂಟೆ ಸಿಂಗಲ್ ಫೇಸ್ ಮತ್ತು ಮೂರು ಫೇಸ್ ವಿದ್ಯುತ್ ನೀಡಲು ಸರಕಾರ ಸಿದ್ದವಿದೆ. ರಾಜಧಾನಿ ಬೆಂಗಳೂರಿನಲ್ಲಿ 20 ರಿಂದ 23 ಗಂಟೆ ಕಾಲ ವಿದ್ಯುತ್ ನೀಡಲಾಗುವುದು ಎಂದು ಹೇಳಿದರು.
ರಾಜ್ಯದ ಜಲಾಶಯಗಳಲ್ಲಿ ಹೆಚ್ಚು ನೀರಿದೆ. ರಾಜ್ಯದ ಒಟ್ಟಾರೆ ಉತ್ಪಾದನೆಯಲ್ಲಿ ಜಲವಿದ್ಯುತ್ ಘಟಕಗಳಿಂದ ಶೇ. 40 ರಷ್ಟು ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ಉತ್ಪಾದನೆ ಪ್ರಮಾಣ ಹೆಚ್ಚು ಮಾಡಲು ಅವಕಾಶವಿದ್ದರೂ ಮಾಡುತ್ತಿಲ್ಲ. ಏಕೆಂದರೆ ಈಗಲೇ ಹೆಚ್ಚೆಚ್ಚು ವಿದ್ಯುತ್ ಉತ್ಪಾದನೆ ಮಾಡುತ್ತಾ ಹೋದರೆ ಬೇಸಿಗೆ ವೇಳೆಗೆ ಜಲಾಶಯಗಳಲ್ಲಿ ನೀರು ಖಾಲಿ ಆಗುತ್ತದೆ. ಹೀಗಾದರೆ ಬೇಸಿಗೆಯಲ್ಲಿ ವಿದ್ಯುತ್ ಪರಿಸ್ಥಿತಿ ಮತ್ತಷ್ಟು ಹದಗೆಡುತ್ತದೆ. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಸೀಮಿತ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ ಎಂದು ಈಶ್ವರಪ್ಪ ವಿವರಿಸಿದರು.
(ದಟ್ಸ್ ಕನ್ನಡ ವಾರ್ತೆ)











Click it and Unblock the Notifications