ಗಣಿಗಾರಿಕೆ : ಸಿಬಿಐ ತನಿಖೆಗೆ ಸ್ಪಂದಿಸುವಂತೆ ಮನವಿ

ಆಂದ್ರಪ್ರದೇಶದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಗಣಿಗಾರಿಕೆ ಕುರಿತು ಸಿಬಿಐ ತನಿಖೆಗೆ ಶಿಫಾರಸ್ಸು ಮಾಡಿದೆ. ರಾಜ್ಯದ ಪ್ರವಾಸೋಧ್ಯಮ ಸಚಿವ ಜನಾರ್ದನರೆಡ್ಡಿ ಮಾಲೀಕತ್ವದ ಓಬಳಾಪುರಂ ಮೈನಿಂಗ್ ಕಂಪನಿ ಸೇರಿದಂತೆ ಆರು ಗಣಿ ಕಂಪನಿಗಳನ್ನು ಕೇಂದ್ರ ಉನ್ನತಾಧಿಕಾರ ಸಮಿತಿ ಶಿಫಾರಸ್ಸಿನ ಮೇರೆಗೆ ಆಂಧ್ರಸರಕಾರ ರದ್ದುಗೊಳಿಸುವಂತೆ ಆದೇಶ ಹೊರಡಿಸಿದೆ.
ಸಿಬಿಐ ತನಿಖೆ ಸಮಗ್ರವಾಗಿ ನಡೆದು ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಲು ಕರ್ನಾಟಕ ನೆರವೂ ಸಹ ಅಗತ್ಯವಾಗಿದೆ. ಆದ್ದರಿಂದ ಸಿಬಿಐ ತನಿಖೆಗೆ ಸಹಕಾರ ನೀಡುವುದಾಗಿ ನಿಮ್ಮ ಸರಕಾರ ಕೇಂದ್ರಕ್ಕೆ ಪತ್ರ ಬರೆಯಲಿ ಎಂದು ಅಂಡಿಕ್ ಮನವಿ ಮಾಡಿದ್ದಾರೆ. ಕೇಂದ್ರ ಸರಕಾರದಿಂದ ಬಂದ ಪತ್ರದ ಬಗ್ಗೆ ರಾಜ್ಯ ಸರಕಾರ ಸಹ ಪೂರಕ ಸ್ಪಂದಿಸಲು ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications