ಗಣಿ : ತನಿಖೆಗೆ ಜಂಟಿ ಸಮಿತಿಗೆ ಗೌಡರ ಒತ್ತಾಯ

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಮತ್ತು ಆಂಧ್ರದಲ್ಲಿ ಒಂದೇ ಸರಕಾರ ಆಡಳಿತ ನಡೆಸುತ್ತಿದೆ. ಹಗರಣದ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಈಗಾಗಲೇ ಆಂಧ್ರ ಸರಕಾರ ಶಿಫಾರಸ್ಸು ಮಾಡಿದೆ. ಇದೆಲ್ಲವೂ ಪಕ್ಷದ ಹೈಕಮಾಂಡ್ ಅನುಸಾರವಾಗಿಯೇ ನಡೆಯುತ್ತಿರಬಹುದು. ಈ ಬಗ್ಗೆ ರಾಷ್ಟ್ರೀಯ ಯಾವ ತೀರ್ಮಾನ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಿ ಎಂದಷ್ಟೆ ಹೇಳಿದರು.
ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳಲಾಗಿದೆ. ಈ ವಿಷಯದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ತೆಗೆದುಕೊಳ್ಳುವ ಎಲ್ಲ ತೀರ್ಮಾನಗಳಿಗೆ ಬದ್ದನಾಗಿರುವೆ. ರಾಜ್ಯದಲ್ಲಿ ದುರಾಡಳಿತ ನಡೆಸುತ್ತಿರುವ ಬಿಜೆಪಿ ಸೋಲಿಸುವ ಏಕೈಕ ಉದ್ದೇಶದಿಂದ ಈ ಮೈತ್ರಿ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.
(ದಟ್ಸ್ ಕನ್ನಡ ವಾರ್ತೆ)











Click it and Unblock the Notifications