ಸಿದ್ರಾಮಯ್ಯಗೆ ಸಿಎಂ ಆಗೋ ಯೋಗ: ಕೋಡಿಮಠ

ಪಟ್ಟಣದಲ್ಲಿ ನಡೆದ ಕನಕ ಜಯಂತಿ ಆಚರಣಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡುತ್ತಾ ರಾಜ್ಯ ರಾಜಕೀಯದ ಬಗ್ಗೆ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ನಾಯಕರಾಗಿರುವ ಸಿದ್ಧರಾಮಯ್ಯ ಅವರಿಗೆ ಮುಖ್ಯಮಂತ್ರಿಯಾಗುವ ಯೋಗವಿದೆ. ಅವರು ಮುಖ್ಯಮಂತ್ರಿಯಾಗಬೇಕು, ಆಗೇ ಆಗುತ್ತಾರೆ ಎಂದು ಶ್ರೀಗಳು ಖಡಾಖಂಡಿತವಾಗಿ ಹೇಳಿದ್ದಾರೆ.
ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ನಾಯಕ ಸಿ ಎಂ ಇಬ್ರಾಹಿಂ, ಏಪ್ರಿಲ್ ನಲ್ಲಿ ಬಿಜೆಪಿ ಸರಕಾರ ಪತನಗೊಂಡು ಮಧ್ಯಂತರ ಚುನಾವಣೆ ನಡೆಯಲಿದೆ ಎಂದು ಹೇಳಿದ್ದಾರೆ. ಹಿಂದುಳಿದ ವರ್ಗದ ಅಲ್ಲಮಪ್ರಭು ಅವರಿಗೆ ಅನುಭವ ಮಂಟಪದಲ್ಲಿ ಬಸವಣ್ಣನವರು ನಾಯಕತ್ವ ವಹಿಸಿದ್ದರು. ಅದೇ ರೀತಿ ಈಗಲೂ ಹಿಂದುಳಿದ ವರ್ಗಗಳ ನಾಯಕ ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಬೇಕು ಎಂದು ಅಭಿಪ್ರಾಯಪಟ್ಟರು.
(ದಟ್ಸ್ ಕನ್ನಡ ವಾರ್ತೆ)











Click it and Unblock the Notifications