2010ಕ್ಕೆ ಮೆಟ್ರೋ ರೈಲು ಶುರು, ಸಿಎಂ

ಬಿಬಿಎಂಪಿ ಪಾಲಿಕೆಯ ದಕ್ಷಿಣ ವಲಯದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು. 18 ತಿಂಗಳು ಬಳಿಕ ಆಡಳಿತಾವಧಿಯಲ್ಲಿ ಬೆಂಗಳೂರು ಸಮಗ್ರ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತರಲಾಗುತ್ತಿದ್ದು, ಅವುಗಳು ಉತ್ತಮವಾಗಿ ಜಾರಿಯಾಗುತ್ತಿವೆ. ಬೆಂಗಳೂರನ್ನು ವಿಶ್ವದರ್ಜೆಯ ನಗರವನ್ನಾಗಿ ಮಾಡುವ ನಿಟ್ಟಿನಲ್ಲಿ ಪೂರಕ ಯೋಜನೆಗಳನ್ನು ಅನುಷ್ಠಾನಗೊಳಿಸಿದ ತೃಪ್ತಿಯಿಂದ ಎಂದು ಯಡಿಯೂರಪ್ಪ ಹೇಳಿದರು.
ಮೆಟ್ರೋ ರೈಲು ಕಾಮಗಾರಿಗೆ 1,200 ಕೋಟಿ ರುಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ. 2010 ರಲ್ಲಿ ಮೊದಲ ಹಂತದಲ್ಲಿ ಮೆಟ್ರೋ ರೈಲು ಸಂಚಾರ ಆರಂಭವಾಗುತ್ತಿದೆ. ಬಿಡಿಎಂ, ಬಿಬಿಎಂಪಿ ವತಿಯಿಂದ 16,000 ಕುಟುಂಬಗಳಿಗೆ ಹಕ್ಕುಪತ್ತ ವಿತರಿಸಲಾಗುವುದು ಎಂದು ಹೇಳಿದರು.
(ದಟ್ಸ್ ಕನ್ನಡ ವಾರ್ತೆ)











Click it and Unblock the Notifications