ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

2010ಕ್ಕೆ ಮೆಟ್ರೋ ರೈಲು ಶುರು, ಸಿಎಂ

By Staff
|
Google Oneindia Kannada News

Yeddyurappa
ಬೆಂಗಳೂರು, ಡಿ. 2 : ಮುಂದಿನ ಒಂದು ವರ್ಷದಲ್ಲಿ ಬೆಂಗಳೂರಿನಲ್ಲಿರುವ ಸುಮಾರು 160 ಕೆರೆಗಳನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸಲು ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ಬಿಬಿಎಂಪಿ ಪಾಲಿಕೆಯ ದಕ್ಷಿಣ ವಲಯದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು. 18 ತಿಂಗಳು ಬಳಿಕ ಆಡಳಿತಾವಧಿಯಲ್ಲಿ ಬೆಂಗಳೂರು ಸಮಗ್ರ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತರಲಾಗುತ್ತಿದ್ದು, ಅವುಗಳು ಉತ್ತಮವಾಗಿ ಜಾರಿಯಾಗುತ್ತಿವೆ. ಬೆಂಗಳೂರನ್ನು ವಿಶ್ವದರ್ಜೆಯ ನಗರವನ್ನಾಗಿ ಮಾಡುವ ನಿಟ್ಟಿನಲ್ಲಿ ಪೂರಕ ಯೋಜನೆಗಳನ್ನು ಅನುಷ್ಠಾನಗೊಳಿಸಿದ ತೃಪ್ತಿಯಿಂದ ಎಂದು ಯಡಿಯೂರಪ್ಪ ಹೇಳಿದರು.

ಮೆಟ್ರೋ ರೈಲು ಕಾಮಗಾರಿಗೆ 1,200 ಕೋಟಿ ರುಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ. 2010 ರಲ್ಲಿ ಮೊದಲ ಹಂತದಲ್ಲಿ ಮೆಟ್ರೋ ರೈಲು ಸಂಚಾರ ಆರಂಭವಾಗುತ್ತಿದೆ. ಬಿಡಿಎಂ, ಬಿಬಿಎಂಪಿ ವತಿಯಿಂದ 16,000 ಕುಟುಂಬಗಳಿಗೆ ಹಕ್ಕುಪತ್ತ ವಿತರಿಸಲಾಗುವುದು ಎಂದು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X