ನಟ ಸಿ.ಆರ್.ಸಿಂಹಗೆ ವಿಶ್ವ ಮಾನವ ಪ್ರಶಸ್ತಿ

ಪ್ರಶಸ್ತಿಯು ತಲಾ 5ಸಾವಿರ ರು. ನಗದು ಮತ್ತು ಫಲಕ ಒಳಗೊಂಡಿರುತ್ತದೆ. ಅಲ್ಲದೆ, ಶ್ರೀಮತಿ ಸಾವಿತ್ರಮ್ಮ ದೇಜಗೌ ಮಹಿಳಾ ಪ್ರಶಸ್ತಿಯನ್ನು ಸಾಹಿತಿ ಡಾ. ಕೆ.ಎನ್. ರತ್ನಮ್ಮ ಅವರಿಗೆ ನೀಡಲಾಗಿದೆ. ಪ್ರಶಸ್ತಿಯು20ಸಾವಿರ ನಗದು ಮತ್ತು ಫಲಕ ಒಳಗೊಂಡಿದೆ. ಕುವೆಂಪು ವಿದ್ಯಾವರ್ಧಕ ಟ್ರಸ್ಟ್ ನೀಡುವ ದಿ. ಎಚ್. ಕೆ. ವೀರಣ್ಣಗೌಡ ಪತ್ರಿಕೋದ್ಯಮ ಪ್ರಶಸ್ತಿಯನ್ನು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನ ಬೆಳಗಾವಿ ವರದಿಗಾರ ಡಾ. ಸರಜೂ ಕಾಟ್ಕರ್ ಅವರಿಗೆ ನೀಡಲಾಗಿದೆ.
ಪ್ರಶಸ್ತಿಯು 12 ಸಾವಿರ ನಗದು ಮತ್ತು ಫಲಕ ಒಳಗೊಂಡಿದೆ. ಈ ಎಲ್ಲ ಪ್ರಶಸ್ತಿಗಳನ್ನು ಡಿ.29ರಂದು ಮೈಸೂರಲ್ಲಿ ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು ಎಂದು ಕುವೆಂಪು ವಿದ್ಯಾವರ್ಧಕ ಟ್ರಸ್ಟ್‌ನ ಕಾರ್‍ಯದರ್ಶಿ ಶಿವಸುಂದರ ಸತ್ಯೇಂದ್ರ ತಿಳಿಸಿದ್ದಾರೆ.
(ಏಜೆನ್ಸೀಸ್)












Click it and Unblock the Notifications