ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೈಸೂರು 2025ರ ಮುನ್ನೋಟಕ್ಕೆ ಮೆಚ್ಚುಗೆ

By Staff
|
Google Oneindia Kannada News

Suresh Kumar
ಮೈಸೂರು, ಡಿ. 6 : ಮಹಾನಗರ ಪಾಲಿಕೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರಗಳು ಆಸ್ತಿ ನಿರ್ಮಾಣ ಮಾಡುವ ಜತೆಗೆ ಅವುಗಳ ನಿರ್ವಹಣೆ ಬಗ್ಗೆ ಹೆಚ್ಚಿನ ಗಮನ ನೀಡಬೇಕೆಂದು ನಗರಾಭಿವೃದ್ಧಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು.

ಮೈಸೂರು ಮಹಾನಗರ ಪಾಲಿಕೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೈಗೊಳ್ಳಲಾಗಿರುವ ವಿವಿಧ ಕಾಮಗಾರಿಗಳನ್ನು ಅವರು ಪರಿಶೀಲಿಸಿದರು. ನಂತರ ನಡೆದ ಅಧಿಕಾರಿಗಳ ಸಭೆಯಲ್ಲಿ ಪ್ರಗತಿ ಪರಿಶೀಲಿಸಿದರು. ಮೈಸೂರಿನಲ್ಲಿ ನಿರ್ಮಿಸಿರುವ ಪಾದಚಾರಿ ಸಬ್‌ವೇಗಳ ನಿರ್ವಹಣೆಗೆ ಸೂಕ್ತ ಕ್ರಮ ವಹಿಸಬೇಕು. ಅಗತ್ಯವಿದ್ದಲ್ಲಿ ಹೊರ ಗುತ್ತಿಗೆ ಆಧಾರದಲ್ಲಿ ಇಲ್ಲವೇ ಜಾಹಿರಾತು ಹಾಕಿಕೊಳ್ಳಲು ಅವಕಾಶ ನೀಡುವ ಮೂಲಕ ಸಬ್‌ವೇಗಳ ನಿರ್ವಹಣೆಯನ್ನು ಖಾಸಗಿ ಸಂಸ್ಥೆಗಳಿಗೆ ವಹಿಸುವ ಬಗ್ಗೆಯೂ ಪರಿಶೀಲಿಸಬೇಕೆಂದು ಸಚಿವರು ಸೂಚಿಸಿದರು.

ಮೈಸೂರು ನಗರದ ಸಮಗ್ರ ಅಭಿವೃದ್ಧಿಗೆ ರೂಪಿಸಿರುವ '2025ರ ಮುನ್ನೋಟ' ಯೋಜನೆ ರೂಪುರೇಷೆಗಳ ಬಗ್ಗೆ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ಮೈಸೂರಿನ ಪಾರಂಪರಿಕ ಕಟ್ಟಡಗಳ ಸಂರಕ್ಷಣೆ, ಪ್ರವಾಸೋದ್ಯಮ ಅಭಿವೃದ್ಧಿಗೆ ರೂಪಿಸಿರುವ ಯೋಜನೆಗಳು ಮತ್ತಿತರ ಅಂಶಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು ಸಾರ್ವಜನಿಕರ ಸಹಭಾಗಿತ್ವದಲ್ಲಿ ಯೋಜನೆಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಬೇಕು ಎಂದರು.

ನರ್ಮ್ ಹಾಗೂ ಮುಖ್ಯಮಂತ್ರಿಗಳ 100 ಕೋಟಿ ರೂ.ಗಳ ವಿಶೇಷ ಅನುದಾನದಲ್ಲಿ ಕೈಗೊಳ್ಳಲಾಗಿರುವ ಹಲವು ಕಾಮಗಾರಿಗಳನ್ನು ಪರಿಶೀಲಿಸಿದರು. ಕಾಮಗಾರಿಗಳ ಗುಣಮಟ್ಟದ ಬಗ್ಗೆ ಸಮಾಧಾನ ವ್ಯಕ್ತಪಡಿಸಿದ ಸಚಿವರು ಇನ್ನು ಉತ್ತಮ ರೀತಿಯಲ್ಲಿ ಕಾಮಗಾರಿ ಇನ್ನಷ್ಟು ಚೆನ್ನಾಗಿ ಮಾಡಬಹುದಿತ್ತು ಎಂದರು.

ಕಾಮಗಾರಿಗಳ ಉಸ್ತುವಾರಿ ನೋಡಿಕೊಳ್ಳುತ್ತಿರುವ ಅಧಿಕಾರಿಗಳು ಕೆಲವೇಳೆ ನಿರ್ಲಕ್ಷ್ಯ ವಹಿಸಿರುವುದು ಕಂಡುಬಂದಿದೆ. ಬಡವರಿಗಾಗಿ ನಿರ್ಮಿಸುತ್ತಿರುವ ಮನೆಗಳಿಗೆ ಬಳಸಲಾದ ಸಿಮೆಂಟ್ ಪ್ರಮಾಣ ಸರಿಯಾಗಿ ಇಲ್ಲದಿರುವುದು ಕಂಡುಬಂದಿದ್ದು, ಪರಿಶೀಲನೆಗಾಗಿ ಕೇಂದ್ರ ಸರ್ಕಾರದ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗುವುದು. ವರದಿ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X