ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಫೆಬ್ರವರಿ 21ಕ್ಕೆ ಬಿಬಿಎಂಪಿ ಚುನಾವಣೆ

By Staff
|
Google Oneindia Kannada News

ಬೆಂಗಳೂರು, ಡಿ. 7 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಕೊನೆಗೂ ಮಹೂರ್ತ ನಿಗದಿಯಾಗಿದ್ದು, ಫೆಬ್ರವರಿ 21ರ ಭಾನುವಾರದಂದು ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗ ಘೋಷಿಸಿದೆ. ಬಿಬಿಎಂಪಿ ವ್ಯಾಪ್ತಿಯ 198 ವಾರ್ಡ್ ಗಳಲ್ಲಿ ಜನವರಿ 15 ರಿಂದ ಫೆಬ್ರವರಿ 25ರ ವರೆಗೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ಆಯೋಗ ಹೇಳಿದೆ.

ಇಂದು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಪತ್ರಿಕಾಗೋಷ್ಠಿ ನಡೆಸಿದ ರಾಜ್ಯ ಚುನಾವಣೆ ಆಯೋಗದ ಮುಖ್ಯ ಆಯುಕ್ತ ಸಿಆರ್ ಚಿಕ್ಕಮಠ, ಬಿಬಿಎಂಪಿ ವ್ಯಾಪ್ತಿಯ 198 ವಾರ್ಡ್ ಗಳಲ್ಲಿ ಫೆಬ್ರವರಿ 21 ರಂದು ಚುನಾವಣೆಗಳು ನಡೆಯಲಿವೆ. 24 ರಂದು ಫಲಿತಾಂಶ ಹೊರಬೀಳಲಿದೆ. ಫೆಬ್ರವರಿ 1 ರಿಂದ ನಾಮಪತ್ರಗಳ ಸಲ್ಲಿಕೆ ಆರಂಭವಾಗಲಿದೆ. ಫೆಬ್ರವರಿ 8 ರವರೆಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನವಾಗಿದೆ. ಫೆಬ್ರವರಿ 9 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಫೆಬ್ರವರಿ 11 ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿರುತ್ತದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆಯುವ ಚುನಾವಣೆಗಳಿಗೆ ರಾಜ್ಯ ಚುನಾವಣಾ ಆಯೋಗ ಸಂಪೂರ್ಣ ಸಿದ್ಧತೆ ಮಾಡಿಕೊಳ್ಳಲಾಗಿದೆ. 34,80,268 ಪುರುಷರು, 31,37,111 ಮಹಿಳಾ ಮತದಾರರು ಸೇರಿದಂತೆ ಒಟ್ಟು 66,17,379 ಮತದಾರರ ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಚುನಾವಣೆಗಾಗಿ ನಾಲ್ಕು ಜಿಲ್ಲಾ ಚುನಾವಣೆಗಳು, 8 ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಗಳು, 60 ರಿಟರ್ನಿಂಗ್ ಅಧಿಕಾರಿಗಳು, 220 ಅಸಿಸ್ಟಂಟ್ ರಿಟರ್ನಿಂಗ್ ಅಧಿಕಾರಿಗಳು, 160 ವೀಕ್ಷಕರು, 110 ನೋಡಲ್ ಅಧಿಕಾರಿಗಳು, 7260 ಪ್ರಿಸೈಡಿಂಗ್ ಅಧಿಕಾರಿಗಳು, 6598 ಮತಗಟ್ಟೆಗಳು, 21,773 ಸಿಬ್ಬಂದಿಗಳನ್ನು ಚುನಾವಣೆಗೆ ಬಳಸಿಕೊಳ್ಳಲಾಗುವುದು. ಚುನಾವಣೆಗೆ ಎಲೆಕ್ಟ್ರಾನಿಕ್ ಮತಯಂತ್ರ ಬಳಸಲಾಗುವುದು ಎಂದು ಚಿಕ್ಕಮಠ ವಿವರಿಸಿದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X