ಉಡುಪಿಯಲ್ಲಿ ಕಿಶೋರ ಯಕ್ಷ ಸಂಭ್ರಮ

ಡಿಸೆಂಬರ್ 7 ರಿಂದ 28ರ ವರೆಗೆ ಈ ಕಾರ್ಯಕ್ರಮ ನಡೆಯಲಿದೆ. ಉಡುಪಿ ವಿಧಾನಸಭಾ ವ್ಯಾಪ್ತಿಯ 43 ಶಾಲೆಗಳಿಂದ ಸುಮಾರು 1000 ಸಾವಿರ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು ಯಕ್ಷಗಾನದ ಬಗ್ಗೆ ತರಬೇತಿ ನೀಡಲಾಗುವುದು ಎಂದು ಯಕ್ಷ ಶಿಕ್ಷಣ ಟ್ರಸ್ಟ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.
30 ಶಾಲೆಯ ವಿದ್ಯಾರ್ಥಿಗಳು ಕೃಷ್ಣ ಮಠದ ಆವರಣದಲ್ಲಿರುವ ರಾಜಾಂಗಣದಲ್ಲಿ ಮತ್ತು ಉಳಿದ 13 ಶಾಲೆಯ ವಿದ್ಯಾರ್ಥಿಗಳು ಬ್ರಹ್ಮಾವರದಲ್ಲಿರುವ ರೋಟರಿ ಭವನದಲ್ಲಿ ಯಕ್ಷಗಾನ ಪ್ರದರ್ಶನ ನೀಡಲಿದ್ದಾರೆ. ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಕುಂಬ್ಳೆ ಸುಂದರ್ ರಾವ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)











Click it and Unblock the Notifications