ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಮ್ಮ ಜೋಳಿಗೆ ಖಾಲಿ ಖಾಲಿ, ಯಡಿಯೂರಪ್ಪ

By Staff
|
Google Oneindia Kannada News

Yeddyurappa
ಶಿವಮೊಗ್ಗ, ಡಿ. 9 : ಪ್ರಸಕ್ತ ಹಣಕಾಸು ವರ್ಷದಲ್ಲಿ ನಿರೀಕ್ಷಿತ ಸಂಪನ್ಮೂಲ ಸಂಗ್ರಹಿಸುವಲ್ಲಿ ರಾಜ್ಯ ಸರಕಾರ ವಿಫಲವಾಗಿರುವುದನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಒಪ್ಪಿಕೊಂಡಿದ್ದಾರೆ. ಪ್ರಸ್ತುತ ನವೆಂಬರ್ ಅಂತ್ಯದ ವೇಳೆಗೆ 48,389 ಕೋಟಿ ರುಪಾಯಿಗಳು ಸಂಗ್ರಹವಾಗಬೇಕಿತ್ತು. ಆದರೆ, ಇಲ್ಲಿಯವರೆಗೆ 28,064 ಕೋಟಿ ರುಪಾಯಿ ಮಾತ್ರ ಸಂಗ್ರಹವಾಗಿದೆ ಎಂದು ಸ್ಪಷ್ಟಪಡಿಸಿದರು.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ವಿಶ್ವದೆಲ್ಲಡೆ ಉಂಟಾಗಿರುವ ಆರ್ಥಿಕ ಕುಸಿತದಿಂದ ರಾಜ್ಯದ ಬೊಕ್ಕಸಕ್ಕೆ ಬರಬೇಕಾಗಿದ್ದ ಆದಾಯ ಕಡಿಮೆಯಾಗಲು ಕಾರಣವಾಗಿದೆ ಎಂದರು. ಮುಂಬರುವ ದಿನಗಳಲ್ಲಿ ಆದಾಯ ಸಂಗ್ರಹದಲ್ಲಿ ಗುರಿ ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದರು. ಈ ವರ್ಷದ ಆಯವ್ಯಯದಲ್ಲಿ 62,416 ಕೋಟಿ ರುಪಾಯಿ ವೆಚ್ಚದ ಅಂದಾಜು ಮಾಡಲಾಗಿತ್ತು. ಆದರೆ, ಮೊದಲ ಎಂಟು ತಿಂಗಳಲ್ಲಿ ಶೇ. 44 ರಷ್ಟು ವೆಚ್ಚ ಮಾಡಲಾಗಿದೆ ಎಂದು ಹೇಳಿದರು.

ಗಣಿಗಾರಿಕೆ ಅನುಮತಿ ನೀಡಿಲ್ಲ

ಅಕ್ರಮ ಗಣಿಗಾರಿಕೆಯಲ್ಲಿ ನಾನು ಪಾಲುದಾರನಾಗಿರುವೆ ಎಂದು ಪ್ರತಿಪಕ್ಷಗಳು ಮಾಡುತ್ತಿರುವ ಆರೋಪವನ್ನು ಅಲ್ಲಗಳೆದ ಯಡಿಯೂರಪ್ಪ, ನನ್ನ ಅಧಿಕಾರ ನನ್ನ ಅಧಿಕಾರ ಅವಧಿಯಲ್ಲಿ ಯಾವುದೇ ಗಣಿಗಾರಿಕೆಗೆ ಒಂದೇ ಒಂದು ಅನುಮತಿ ನೀಡಿಲ್ಲ ಎಂದು ಸ್ಪಷ್ಟಪಡಿಸಿದರು. ಧರ್ಮಸಿಂಗ್ ಕಾಲದಲ್ಲಿ 44 ಗಣಿಗಾರಿಕೆಗೆ ಅನುಮತಿ ನೀಡಿದರೆ, ಎಚ್ ಡಿ ಕುಮಾರಸ್ವಾಮಿ ಕಾಲದಲ್ಲಿ 47 ಗಣಿಗಾರಿಕೆಗೆ ಅನುಮತಿ ನೀಡಲಾಗಿದೆ. ಇನ್ನೂ ರಾಷ್ಟ್ರಪತಿ ಆಡಳಿತದಲ್ಲಿ 22 ಅನುಮತಿ ನೀಡಲಾಗಿದೆ ಎಂದು ಯಡಿಯೂರಪ್ಪ ವಿವರಿಸಿದರು. ಯಡಿಯೂರಪ್ಪ ಮತ್ತೊಮ್ಮೆ ಸ್ಪಷ್ಟಪಡಿಸಿದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X