ಕೂಡಗಿ ಧರ್ಮಲ್ ಘಟಕಕ್ಕೆ ಅನುಮೋದನೆ, ಸಿಎಂ

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡುತ್ತಿದ್ದ ಅವರು, 4000 ಮೆಗಾವ್ಯಾಟ್ ಸಾಮರ್ಥ್ಯದ ಕೂಡಗಿ ಥರ್ಮಲ್ ವಿದ್ಯುತ್ ಸ್ಥಾವರಕ್ಕೆ ರಾಷ್ಟ್ರೀಯ ಶಾಖೋತ್ಪನ್ನ ವಿದ್ಯುತ್ ನಿಗಮ (ಎನ್ ಟಿಪಿಸಿ) ಅನುಮೋದನೆ ನೀಡಿದೆ. ಈ ಕುರಿತಂತೆ ಬೆಂಗಳೂರಿನಲ್ಲಿ ಸುದೀರ್ಘ ಚರ್ಚೆ ನಡೆಸಲಾಗಿದೆ. ವಿದ್ಯುತ್ ಸ್ಥಾವರದ ಕಾಮಗಾರಿ ಆರಂಭಿಸಲು ಭೂಮಿ ಪೂಜೆ ಕಾರ್ಯಕ್ಕೆ ಸಿದ್ಧತೆ ನಡೆಯುತ್ತಿರುವುದಾಗಿ ತಿಳಿಸಿದರು.
ಕೇಂದ್ರದ ಭೇಟಿ : ಕೂಡಗಿ ವಿದ್ಯುತ್ ಸ್ಥಾವರಕ್ಕೆ ಅಗತ್ಯ ಎಲ್ಲ ಸೌಕರ್ಯ ಕಲ್ಪಿಸಲು ರಾಜ್ಯ ಸರ್ಕಾರ ಸಿದ್ಧವಿದೆ. ರೇಲ್ವೆ ಮಾರ್ಗ ವಿಸ್ತರಣೆ ಸೇರಿದಂತೆ ಅಗತ್ಯ ಸೌಕರ್ಯ ದೊರಕಿಸಿಕೊಡಲು ಕೇಂದ್ರ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದೇನೆ. ವಿದ್ಯುತ್ ಸಮಸ್ಯೆ ನಿವಾರಣೆಗಾಗಿ ರಾಜ್ಯಕ್ಕೆ ಎಲ್ಲಾ ನೆರವು ನೀಡಲು ಕೇಂದ್ರ ಒಪ್ಪಿಗೆ ಸೂಚಿಸಿದೆ. ಅಧಿವೇಶನದ ನಂತರ ದೆಹಲಿಗೆ ತೆರಳಿ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿದರು.
ಅಧಿವೇಶನದಲ್ಲಿ ಚರ್ಚೆ : ರಾಜ್ಯದ ನೆರೆ ಪರಿಹಾರ, ಗಣಿ ಸಮಸ್ಯೆ, ಬೆಂಗಳೂರು ಮೈಸೂರು ಕಾರಿಡಾರ್ ವಿಚಾರಗಳನ್ನು ಬರುವ 14 ರಂದು ನಡೆಯುವ ವಿಧಾನ ಮಂಡಳ ಅಧಿವೇಶನದಲ್ಲಿ ಚರ್ಚಿಸಲು ಸರ್ಕಾರ ಮುಕ್ತ ಮನಸ್ಸು ಹೊಂದಿರುವುದಾಗಿ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications