ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೈಕ ಅಭಿವೃದ್ಧಿಗೆ ಕೇಂದ್ರದ ಗಮನ ಅಗತ್ಯ, ಶೆಟ್ಟರ್

By Staff
|
Google Oneindia Kannada News

Shettar urges to centre for funds in HK region
ಬೆಂಗಳೂರು, ಡಿ. 12 : ಅತ್ತ ತೆಲಂಗಾಣ ಪ್ರತ್ಯೇಕ ರಾಜ್ಯಕ್ಕಾಗಿ ಪರ ವಿರೋಧ ಹೋರಾಟಗಳು ಇನ್ನೂ ಮುಂದುವರಿಯುತ್ತಿದ್ದು, ಇತ್ತ ಉತ್ತರ ಕರ್ನಾಟಕ, ಹೈದರಾಬಾದ್ ಕರ್ನಾಟದಲ್ಲಿ ಪ್ರತ್ಯೇಕ ರಾಜ್ಯದ ಕೂಗು ಧ್ವನಿ ಕೇಳಲಾರಂಭಿಸಿದೆ. ಕೇಂದ್ರ ಸರಕಾರ ಹೈದರಾಬಾದ್ ಕರ್ನಾಟಕಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಿ ಸರ್ವಾಂಗೀಣ ಅಭಿವೃದ್ಧಿಗೆ ಮುಂದಾಗದಿದ್ದರೆ ಪ್ರತ್ಯೇಕ ರಾಜ್ಯದ ಹೋರಾಟ ಮತ್ತಷ್ಟು ಬಲಗೊಳ್ಳಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಜಗದೀಶ್ ಶೆಟ್ಟರ್ ಎಚ್ಚರಿಕೆ ನೀಡಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಳೆದ ಐದು ದಶಕಗಳಿಂದ ಹೈದರಾಬಾದ್ ಕರ್ನಾಟಕದ ಪ್ರದೇಶದ ಜಿಲ್ಲೆಗಳು ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿವೆ. ಕಲಂ 371 ಜಾರಿಗೊಳಿಸುವ ಮೂಲಕ ಈ ಪ್ರದೇಶದ ಅಭಿವೃದ್ಧಿಗೆ ಚಾಲನೆ ನೀಡಬೇಕು ಎಂದು ಕೇಂದ್ರ ಸರಕಾರಕ್ಕೆ ಅನೇಕ ಬಾರಿಗೆ ಮನವಿ ಮಾಡಿಕೊಳ್ಳಲಾಗಿದೆ. ಆದರೆ, ಈವರೆಗೂ ಪ್ರಯೋಜನವಾಗಿಲ್ಲ. ಕೇಂದ್ರದ ಮನಸ್ಥಿತಿ ಹೀಗೆ ಮುಂದುವರೆದಲ್ಲಿ ಹೈದರಾಬಾದ್ ಕರ್ನಾಟಕ ಪ್ರದೇಶದ ಜನತೆಯ ಪ್ರತ್ಯೇಕ ರಾಜ್ಯದ ಕೂಗು ಗಟ್ಟಿಯಾಗುವುದರಲ್ಲಿ ಸಂಶಯವಿಲ್ಲ ಎಂದು ಶೆಟ್ಟರ್ ವಿವರಿಸಿದರು.

ಹೈದರಾಬಾದ್ ಕರ್ನಾಟಕ ಹಿಂದುಳಿಯಲು ರಾಜ್ಯ ಸರಕಾರದ ನಿರ್ಲಕ್ಷ್ಯವೂ ಕಾರಣ. ರಾಜ್ಯದ ಅಧಿಕಾರ ಚುಕ್ಕಾಣಿ ಹಿಡಿದ ಎಲ್ಲ ಸರಕಾರಗಳು ಈ ಪ್ರದೇಶದ ಅಭಿವೃದ್ಧಿಗೆ ಗಮನ ಹರಿಸಿರುವುದು ವಿರಳ. ಇದಕ್ಕೆ ಯಡಿಯೂರಪ್ಪ ಸರಕಾರವೂ ಹೊರತಲ್ಲ. ಬಜೆಟ್ ನಲ್ಲಿ ನಂಜುಂಡಪ್ಪ ವರದಿಯನ್ವಯ ಸಾವಿರಾರು ಕೋಟಿ ರುಪಾಯಿಗಳ ತೆಗೆದಿರಿಸಿದರೆ ಸಾಲದು, ಅದನ್ನು ಪ್ರಮಾಣಿಕವಾಗಿ ಅನುಷ್ಠಾನಗೊಳಿಸಬೇಕು. ಆ ಕೆಲಸ ಸರಿಯಾಗಿ ನಿರ್ವಹಿಸುವಲ್ಲಿ ಪ್ರಸ್ತುತ ಸರಕಾರ ಕೂಡ ವಿಫಲವಾಗಿದೆ. ಕುಡಿಯುವ ನೀರು, ರಸ್ತೆಗಳ ದುರಸ್ತಿ, ವಿದ್ಯುತ್ ಇಂತಹ ಅನೇಕ ಮೂಲಭೂತ ಸೌಲಭ್ಯಗಳು ಈ ಪ್ರದೇಶಗಳಲ್ಲಿ ಇನ್ನೂ ದೊರೆತಿಲ್ಲ. ಕೇಂದ್ರ ಮತ್ತು ರಾಜ್ಯ ಸರಕಾರಗಳ ನಿರ್ಲಕ್ಷ್ಯ ಇದೇ ರೀತಿ ಮುಂದುವರಿದಲ್ಲಿ ತೆಲಂಗಾಣ ಮಾದರಿ ಹೋರಾಟ ಅನಿವಾರ್ಯವಾಗಬಹುದು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X