ಖ್ಯಾತ ಫೋಟೋ ಜರ್ನಲಿಸ್ಟ್ ಸತ್ಯನ್ ಇನ್ನಿಲ್ಲ

ಎರಡು ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ ನಡೆದ ಮೊಮ್ಮಗನ ಮದುವೆಯಲ್ಲಿ ಭಾಗವಹಿಸಿ ಶನಿವಾರ ನಗರಕ್ಕೆ ಆಗಮಿಸಿದ್ದ ಅವರು ಶನಿವಾರ ಸಂಜೆ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಭಾನುವಾರ ಮಧ್ಯಾಹ್ನ ಇಲ್ಲಿನ ಬಿಎಂ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು.
ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಇರುವ ಹರಿಶ್ಚಂದ್ರ ಘಾಟ್ ನಲ್ಲಿ ಭಾನುವಾರ ಸಂಜೆಯೇ ಅವರ ಅಂತ್ಯಕ್ರಿಯೆ ನೆರವೇರಿತು. ಪತ್ನಿ, ಇಬ್ಬರು ಗಂಡು ಮಕ್ಕಳು, ಒಬ್ಬ ಮಗಳು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಸತ್ಯನ್ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ರಾಜ್ಯದ ಪ್ರಮುಖ ಘಟನೆಗಳನ್ನು ತಮ್ಮ ಛಾಯಾಚಿತ್ರಗಳ ಮೂಲಕ ವಿಶ್ವಕ್ಕೆ ಪರಿಚಯಿಸಿದ ಸತ್ಯನ್ ಅವರು ಅಪ್ರತಿಮ ಪ್ರತಿಭಾವಂತರಾಗಿದ್ದರು ಎಂದು ಪ್ರಶಂಸಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications