ಕನ್ನಡ ಅಭ್ಯರ್ಥಿಗೆ ಮನ್ನಣೆ ನೀಡಿ : ಮುಮ ಚಂದ್ರು

ವಿಧಾನ ಸೌಧದಲ್ಲಿ ಪತ್ರಕರ್ತರನ್ನುದ್ದೇಶಿಸಿ ಮಾತನಾಡುತ್ತಿದ್ದ ಅವರು ಒಕ್ಕೂಟ ವ್ಯವಸ್ಥೆಯಲ್ಲಿ ನಾವಿದ್ದರೂ ರಾಜ್ಯಕ್ಕೆ ಬಂದು ನೆಲಗೊಂಡವರು ಆಂಗ್ಲ ಭಾಷೆಯನ್ನು ವಿಜೃಂಭಿಸುವಂತೆ ಮಾಡಿ ನಾಡು ನುಡಿಗೆ ಹಿನ್ನಡೆಯಾಗುವಂತೆ ಮಾಡುವುದನ್ನು ಸಹಿಸುವುದು ಸಾಧ್ಯವಿಲ್ಲವೆಂದು, ಕನ್ನಡ ವಾತಾವರಣ ನಿರ್ಮಾಣವಾಗುವುದಕ್ಕೆ ಕರ್ನಾಟಕದ ಒಟ್ಟಾರೆ ಹಿತದೃಷ್ಟಿಯಿಂದ ಈ ಮನವಿಯನ್ನು ಜನರಿಗೂ ತಿಳಿಸಲಾಗುವುದೆಂದರು.
ಹುಬ್ಬಳ್ಳಿಯಲ್ಲಿ ಕನ್ನಡ ಮಾಧ್ಯಮ ಪ್ರಶಸ್ತಿ ಪ್ರಧಾನ ಸಮಾರಂಭ
ಕನ್ನಡ ಮಾಧ್ಯಮ ಪ್ರಶಸ್ತಿ ಪ್ರಧಾನ ಸಮಾರಂಭ ಹುಬ್ಬಳ್ಳಿಯ ಸವಾಯಿಗಂಧರ್ವ ಸಭಾಂಗಣದಲ್ಲಿ ಡಿ.19ರಂದು ನಡೆಯಲಿದೆ. ಸಮಾರಂಭದ ಉದ್ಘಾಟನೆಯನ್ನು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಜಗದೀಶ್ ಶೆಟ್ಟರ್ ಅವರು ನೆರವೇರಿಸಲಿದ್ದು, ವಿಧಾನ ಪರಿಷತ್‌ನ ಸಭಾಪತಿ ವೀರಣ್ಣ ಮತ್ತಿಕಟ್ಟಿ ಅವರು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ ಎಂದು ಚಂದ್ರು ತಿಳಿಸಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications