ವಿಲೀನಕ್ಕೆ ವಿರೋಧಿಸಿ ಬ್ಯಾಂಕ್ ನೌಕರರ ಮುಷ್ಕರ

ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ ಹಾಗೂ ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘಗಳು ಜಂಟಿಯಾಗಿ ದೇಶದಾದ್ಯಂತ ಮುಷ್ಕರಕ್ಕೆ ಕರೆ ನೀಡಿವೆ. ಎಲ್ಲಾ ಬ್ಯಾಂಕ್ ಸಿಬ್ಬಂದಿ ಮುಷ್ಕರದಲ್ಲಿ ಪಾಲ್ಗೊಳ್ಳುವುದಾಗಿ ಭಾರತೀಯ ಸ್ಟೇಟ್ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷ ಗುರುಮೂರ್ತಿ ತಿಳಿಸಿದ್ದಾರೆ.
ಸುಮಾರು 4 ಲಕ್ಷ ನೌಕರರು ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಹವರ್ತಿ ಬ್ಯಾಂಕುಗಳ ವಿಲೀನ ಪ್ರಕ್ರಿಯೆಯನ್ನು ಕೈಬಿಡಬೇಕು ಹಾಗೂ ತಮ್ಮೊಂದಿಗೆ ಮಾತುಕತೆ ಮುಂದುವರಿಸಬೇಕು ಎಂದು ನೌಕರರ ಒಕ್ಕೂಟಗಳು ಬೇಡಿಕೆ ಇಟ್ಟಿದ್ದವು. ಮಂಗಳವಾರ ನಡೆದ ಸಭೆಯಲ್ಲಿ ಎಸ್ ಬಿಐ ಆಡಳಿತ ಮಂಡಳಿ ಈ ಬೇಡಿಕೆಯನ್ನು ಮನ್ನಿಸದ ಕಾರಣ ಮುಷ್ಕರಕ್ಕೆ ಮುಂದಾಗಿದ್ದೇವೆ ಎಂದು ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಎಚ್.ವೆಂಕಟಾಚಲಮ್ ತಿಳಿಸಿದ್ದಾರೆ.
(ಏಜೆನ್ಸೀಸ್)












Click it and Unblock the Notifications