ತ್ರಿಸದಸ್ಯ ಸಮಿತಿಯಿಂದ ತನಿಖೆ ಆಗ್ಲಿ: ದಿನಕರನ್
ನವದೆಹಲಿ,
ಡಿ 16 : ಅಕ್ರಮ ಆಸ್ತಿ ಮತ್ತು ಸಂಪತ್ತು ಆರೋಪ ಎದುರಿಸುತ್ತಿರುವ ಕರ್ನಾಟಕದ ನ್ಯಾಯಮೂರ್ತಿ ಪಿ ಡಿ ದಿನಕರನ್, ಅದರ ತನಿಖೆ ನಡೆಸಲು ಮೂರು ಮಂದಿ ಸದಸ್ಯರ ಸಮಿತಿಯೊಂದನ್ನು ನೇಮಿಸುವಂತೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಕೆ ಜಿ ಬಾಲಕೃಷ್ಣನ್ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ. id="toptextpromo">ದಿನಕರನ್
ವಿರುದ್ದ ತನಿಖಾ ಪ್ರಕ್ರಿಯೆ ಆರಂಭವಾದ ನಂತರ ಅವರು ನ್ಯಾಯಾಲಯದ ಯಾವುದೇ ಪ್ರಕ್ರಿಯೆಗಳಲ್ಲಿ ಭಾಗವಹಿಸುವಂತಿಲ್ಲ ಎಂದು ಮುಖ್ಯ ನ್ಯಾಯಮೂರ್ತಿಗಳ ಹೇಳಿಕೆಯ ನಂತರ ದಿನಕರನ್ ಈ ಮನವಿ ಸಲ್ಲಿಸಿದ್ದಾರೆ. ಈಗಾಗಲೇ ರಾಜ್ಯಸಭೆಯ 76 ಸದಸ್ಯರು ಸಭಾಪತಿ ಹಮೀದ್ ಅನ್ಸಾರಿ ಅವರಿಗೆ ದಿನಕರನ್ ಅವರನ್ನು ಮಹಾಭಿಯೋಗಕ್ಕೆ ಒಳಪಡಿಸಬೇಕೆಂದು ಸೋಮವಾರ (ಡಿ 14 ) ಮನವಿ ಸಲ್ಲಿಸಿದ್ದಾರೆ. id='are-slot-1' class='oiad oi-axt oiadv'> id='top-searched-articles'>(ಏಜೆನ್ಸೀಸ್)












Click it and Unblock the Notifications