ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪರಿಷತ್ ಚುನಾವಣೆ: ಬಹಿರಂಗ ಪ್ರಚಾರ ಅಂತ್ಯ

By Staff
|
Google Oneindia Kannada News

Stage is set for MLC Election
ಬೆಂಗಳೂರು, ಡಿ.16: ರಾಜ್ಯ ವಿಧಾನಪರಿಷತ್ ಚುನಾವಣೆಯ ಬಹಿರಂಗ ಪ್ರಚಾರ ಬುಧವಾರ(ಡಿ.16) ಸಂಜೆ ನಾಲ್ಕು ಗಂಟೆಗೆ ಅಂತ್ಯಗೊಳ್ಳಲಿದೆ.ಆ ನಂತರ ಯಾವುದೇ ವ್ಯಕ್ತಿ ಅಥವಾ ಪಕ್ಷ ವಿಧಾನ ಪರಿಷತ್ ಚುನಾವಣೆಗೆ ಬಹಿರಂಗ ಪ್ರಚಾರ ಮಾಡಿದಲ್ಲಿ ಎರಡು ವರ್ಷ ಜೈಲುಶಿಕ್ಷೆ ಹಾಗೂ ದಂಡ ವಿಧಿಸಲಾಗುವುದು ಎಂದು ಜಂಟಿ ಮುಖ್ಯ ಚುನಾವಣಾಧಿಕಾರಿ ಬ.ವಿ.ಕುಲಕರ್ಣಿ ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ.

ಡಿಸೆಂಬರ್ 18ರಂದು ವಿಧಾನ ಪರಿಷತ್ ಚುನಾವಣೆ ನಡೆಯಲಿದ್ದು, ಪ್ರಜಾ ಪ್ರಾತಿನಿಧ್ಯ ಕಾಯ್ದೆ ಪ್ರಕಾರ ಚುನಾವಣೆ ಮುಕ್ತಾಯವಾಗುವ ಸಮಯಕ್ಕಿಂತ 48 ಗಂಟೆ ಮೊದಲು ಯಾವುದೇ ರೀತಿಯ ಬಹಿರಂಗ ಚುನಾವಣಾ ಪ್ರಚಾರ ಮಾಡುವಂತಿಲ್ಲ. ಸಾರ್ವಜನಿಕರಿಗೆ ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ಮಾಹಿತಿಗಳನ್ನು ಚಿತ್ರ ಪ್ರದರ್ಶನ, ದೂರದರ್ಶನ ಅಥವಾ ಇಂತಹ ಪ್ರಸಾರ ಮಾಧ್ಯಮಗಳ ಮೂಲಕ ಪ್ರದರ್ಶನ ಮಾಡಬಾರದು.

ಈ ಅವಧಿಯಲ್ಲಿ ಮತದಾರರನ್ನು ಓಲೈಸುವ ಸಲುವಾಗಿ ಯಾವುದೇ ರೀತಿಯ ಸಂಗೀತ ಕಾರ್ಯಕ್ರಮ ಅಥವಾ ಚಿತ್ರ ಪ್ರದರ್ಶನ ಅಥವಾ ಯಾವುದೇ ಮನರಂಜನೆಗಳು ಅಥವಾ ವಿನೋದ ಪ್ರದರ್ಶನಗಳ ಮೂಲಕ ಚುನಾವಣೆಗೆ ಸಂಬಂಧಿಸಿದ ಮಾಹಿತಿಗಳನ್ನು ಸಾರ್ವಜನಿಕರಿಗೆ ಪ್ರದರ್ಶಿಸಬಾರದು. ಈ ಕಲಂನ್ನು ಉಲ್ಲಂಘಿಸಿದ ಯಾರೇ ವ್ಯಕ್ತಿಯು ಎರಡು ವರ್ಷಗಳವರೆಗೆ ವಿಸ್ತರಿಸಬಹುದಾದ ಕಾರಾವಾಸದಿಂದ ಅಥವಾ ಜುಲ್ಮಾನೆಯಿಂದ ಅಥವಾ ಅವೆರಡರಿಂದಲೂ ದಂಡಿತನಾಗತಕ್ಕದ್ದು ಎಂದಿರುತ್ತದೆ.ಎಂದು ಅವರು ತಿಳಿಸಿದ್ದಾರೆ.

ರಾಜ್ಯದ 20ಜಿ ಲ್ಲೆಗಳ 25 ವಿಧಾನಪರಿಷತ್ ಕ್ಷೇತ್ರಗಳಿಗೆ ಡಿ.18ರಂದು ಚುನಾವಣೆ ನಡೆಯಲಿದ್ದು, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಕಾಂಗ್ರೆಸ್‌ನ ಕೆ.ಪ್ರತಾಪ್ ಚಂದ್ರ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಳಿದ 23ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X