ಓಎಂಸಿ ಸಿಬಿಐ ತನಿಖೆ ಮುಂದುವರೆಸಿ: ಸು.ಕೋರ್ಟ್
ನವದೆಹಲಿ
,ಡಿ 17 : ಓಬಳಾಪುರಂ ಮೈನಿಂಗ್ ಕಂಪೆನಿಯ ಮೇಲೆ ನಡೆಯುತ್ತಿರುವ ಸಿಬಿಐ ತನಿಖೆಗೆ ಆಂಧ್ರ ಉಚ್ಚ ನ್ಯಾಯಾಲಯ ನೀಡಿದ್ದ ತೀರ್ಪಿಗೆ ಇಂದು ಸರ್ವೋಚ್ಚ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಮುಖ್ಯನ್ಯಾಯಮೂರ್ತಿ ಕೆಜಿ ಬಾಲಕೃಷ್ಣನ್ ಅವರನ್ನುಳ್ಳ ವಿಭಾಗೀಯ ಪೀಠ ಈ ಆದೇಶವನ್ನು ಹೊರಡಿಸಿದೆ. ಈ ಮೂಲಕ ಜನಾರ್ದನ ರೆಡ್ಡಿ ಹಿನ್ನಡೆ ಅನುಭವಿಸಿದ್ದಾರೆ. ಜನವರಿ 4ಕ್ಕೆವಿಚಾರಣೆ ಮುಂದೂಡಲಾಗಿದೆ ಎಂದು ನ್ಯಾಯಾಲಯದ ಆದೇಶದಲ್ಲಿ ಹೇಳಲಾಗಿದೆ. id="toptextpromo">ಕರ್ನಾಟಕ
ಪ್ರವಾಸೋದ್ಯಮ ಸಚಿವ ಜನಾರ್ದನ ರೆಡ್ಡಿ ಮಾಲೀಕತ್ವದ ಓಬಳಾಪುರಂ ಮೈನಿಂಗ್ ಕಂಪೆನಿ ಅಕ್ರಮ ಗಣಿಗಾರಿಕೆ ನಡೆಸುತ್ತಿದೆ ಎಂದು ರೋಸಯ್ಯ ಸರಕಾರ ಸಿಬಿಐ ತನಿಖೆಗೆ ಆದೇಶ ನೀಡಿತ್ತು. ಸರಕಾರದ ನಿರ್ಧಾರದ ವಿರುದ್ದ ಆಂಧ್ರ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿ ತಡೆಯಾಜ್ಞೆ ಪಡೆಯುವಲ್ಲಿ ರೆಡ್ಡಿ ಸಫಲರಾಗಿದ್ದರು. ಆಂಧ್ರ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆಯನ್ನು ಪ್ರಶ್ನಿಸಿ ಆಂಧ್ರಪ್ರದೇಶ ಸರಕಾರ ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಿ ತಡೆಯಾಜ್ಞೆ ತೆರವುಗೊಳಿಸುವುದರಲ್ಲಿ ಯಶಸ್ವಿಯಾಗಿದೆ. id='are-slot-1' class='oiad oi-axt oiadv'> id='top-searched-articles'>(ದಟ್ಸ್
ಕನ್ನಡವಾರ್ತೆ)











Click it and Unblock the Notifications