ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ 18 ಸ್ಥಾನ ಗೆದ್ದರೆ ಡಿಕೆಶಿ ರಾಜಿನಾಮೆ!

By * ಪೂರ್ಣಚಂದ್ರ ಮಾಗಡಿ
|
Google Oneindia Kannada News

DK Shivakumar casts vote in Ramnagar
ರಾಮನಗರ, ಡಿ. 18 : ಬೆಂಗಳೂರು ಗ್ರಾಮಾಂತರ ವಿಧಾನಪರಿಷತ್ ಕ್ಷೇತ್ರ ವ್ಯಾಪ್ತಿಯ ರಾಮನಗರ ಜಿ.ಪಂ.ಕಛೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಮತಚಲಾವಣೆ ಮಾಡಿದರು. ಮತಚಲಾವಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿ, ಬಿಜೆಪಿ ದುರಾಡಳಿತದಿಂದ ಜನತೆ ಬೇಸತ್ತಿದ್ದಾರೆ. ವಿಧಾನಪರಿಷತ್ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 16 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ ತಕ್ಷಣವೇ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ, ಇಲ್ಲದಿದ್ದರೆ ಮುಖ್ಯಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವರೆ ಎಂದು ಸವಾಲು ಹಾಕಿದರು.

ಭ್ರಮೆಯಲ್ಲಿ ತೇಲುತ್ತಿರುವ ಬಿಜೆಪಿಯವರ ಕೊನೆಯ ದಿನಗಳ ಕೌಂಟ್‌ಡೌನ್ ಆರಂಭವಾಗಿದೆ, ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಪಕ್ಷಗಳು ರಾಜ್ಯದಲ್ಲಿ 18 ಸ್ಥಾನಗಳಲ್ಲಿ ಜಯಗಳಿಸುವುದು ಖಚಿತವಾಗಿದೆ ಎಂದು ಡಿ.ಕೆ.ಶಿವಕುಮಾರ್ ಆತ್ಮವಿಶ್ವಾಸ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುವರೆಂದು ಹೇಳಿರುವ ಧರ್ಮ್‌ಸಿಂಗ್‌ರ ಭವಿಷ್ಯದ ಗರ್ಭದಲ್ಲೇನಿದೆ ಎಂಬುದು ನನಗೆ ಗೊತ್ತಾಗಿಲ್ಲ. ಸದ್ಯಕ್ಕೆ ರಾಜ್ಯದಲ್ಲಿ ಇಂತಹ ಸಂದರ್ಭ ನಿರ್ಮಾಣವಾಗಿಲ್ಲ. ಕಾಂಗ್ರೆಸ್ ಪಕ್ಷ ಜನರ ಬಳಿ ಹೋಗಲು ಸಿದ್ಧವಾಗಿದೆ, ಹಿಂಬಾಗಿಲಿನ ಮೂಲಕ ರಾಜಕಾರಣ ಮಾಡುವ ಅನಿವಾರ್ಯತೆ ಕಾಂಗ್ರೆಸ್‌ಗೆ ಎದುರಾಗಿಲ್ಲವೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ಯಾವುದೇ ರೀತಿಯ ಫ್ರೆಂಡ್ಲಿ ಫೈಟ್ ಇಲ್ಲ. ಏನಿದ್ದರು ಡೆಡ್ಲಿ ಫೈಟ್ ಅಷ್ಟೇ. ಈಗಾಗಲೇ ಬಿಜೆಪಿಯ 200ಕ್ಕೂ ಹೆಚ್ಚು ಚುನಾಯಿತ ಪ್ರತಿನಿಧಿಗಳು ಕಾಂಗ್ರೆಸ್ ಪರವಾಗಿದ್ದಾರೆ. ಕಣದಲ್ಲಿ ಬಿಜೆಪಿ ಇದ್ದರೂ ಆಟಕ್ಕುಂಟು ಲೆಕ್ಕಕ್ಕಿಲ್ಲದಂತಾಗಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ. ಕಾಂಗ್ರೆಸ್ ಅಥವಾ ಜೆಡಿಎಸ್ ಗೆಲ್ಲಬಹುದು ಆದರೆ ಯಾವುದೇ ಕಾರಣಕ್ಕೂ ಬಿಜೆಪಿಗೆ ಕ್ಷೇತ್ರದಲ್ಲಿ ಗೆಲುವು ಸಾಧ್ಯವೇಇಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X