ನೀರು ದರ ಏರಿಕೆ ಇಲ್ಲ: ಸಚಿವ ಕಟ್ಟಾ

ಮುಂದಿನ ತಿಂಗಳಲ್ಲಿ ನಡೆಯುವ ಮಂಡಲಿ ಸಭೆಯಲ್ಲಿ ನೀರಿನ ದರ ಏರಿಕೆ ಕುರಿತು ಚರ್ಚೆ ನಡೆಯಲಿದೆ. ಇತ್ತೀಚಿಗಷ್ಟೆ ವಿದ್ಯುತ್ ದರಹೆಚ್ಚಳವಾದ ಕಾರಣ ಸಂಸ್ಥೆ ಮೇಲೆ ಪ್ರತಿ ತಿಂಗಳು 2 ಕೋಟಿ ರೂ. ಹೆಚ್ಚವರಿ ವೆಚ್ಚ ಬರುತ್ತಿದ್ದು, ಅದನ್ನು ಸರಿದೂಗಿಸಲು ಅಲ್ಪ ಪ್ರಮಾಣದಲ್ಲಿ ಶುಲ್ಕ ಏರಿಸಬೇಕೆಂಬ ವಿಚಾರ ಅಧಿಕಾರಿ ವರ್ಗದಲ್ಲಿದೆ. ಆದರೆ ಮುಂದೆ ಬರಲಿರುವ ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ದರ ಪರಿಷ್ಕರಣೆ ಮಾಡದಿರುವಂತೆ ಮುಖ್ಯಮಂತ್ರಿ ಜಲಮಂಡಳಿ ಸಚಿವರಿಗೆ ಸೂಚಿಸಿದ್ದಾರೆನ್ನಲಾಗಿದೆ. ಹಾಗಾಗಿ ಯುಗಾದಿವರೆಗೂ ಗ್ರಾಹಕರು ನಿರಾಳವಾಗಿ ರಬಹುದು.
ಮಳೆನೀರು ಕೊಯ್ಲಿಗೆ ಕಾಯ್ದೆ: ಬೆಂಗಳೂರು ಮಹಾನಗರದಲ್ಲಿ ಮಳೆ ನೀರು ಕೊಯ್ಲು ಅಳವಡಿಕೆ ಕಡ್ಡಾಯ ಮಾಡಲಾಗಿದೆ. ಈ ಸಂಬಂಧ ನಿರ್ಧಾರ ಕೈಗೊಂಡಿದ್ದು, ಪೂರ್ಣ ಪ್ರಮಾಣದಲ್ಲಿ ಜಾರಿ ಮಾಡಲು ಕಾಯ್ದೆ ರೂಪಿಸಲಾಗುತ್ತಿದೆ. ಮುಂದಿನ ಬಜೆಟ್‌ಗೆ ಮುನ್ನ ಕಾಯ್ದೆ ಸಿದ್ಧಪಡಿಸಿ ಅನುಮೋದನೆ ಪಡೆಯಲಾಗುವುದು. ಜತೆಗೆ ಈ ಪ್ರಸ್ತಾಪವನ್ನು ರಾಜ್ಯದ ಎಲ್ಲ ನಗರ ಪ್ರದೇಶಗಳಿಗೂ ವಿಸ್ತರಿಸಲು ಸರ್ಕಾರ ಮುಂದಾಗಿದೆ. ಹಾಗಾಗಿ ನಗರಾಭಿವೃದ್ಧಿ, ಲೋಕೋಪಯೋಗಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ.
ಇದರಿಂದಾಗಿ ಸರ್ಕಾರದ ಎಲ್ಲ ಕಚೇರಿಗಳು, ಶಾಲಾ-ಕಾಲೇಜು, ಕೈಗಾರಿಕೆಗಳಲ್ಲಿ ಮಳೆನೀರು ಅನುಷ್ಠಾನಗೊಳ್ಳಲಿದೆ ಎಂದು ಸಚಿವ ಕಟ್ಟಾ ತಿಳಿಸಿದರು.ಮನೆಗಳಲ್ಲಿ ಮಳೆಕೊಯ್ಲು (rain water harvesting)ವಿಧಾನವನ್ನು ಬಳಸಿ ಪರಿಸರ ಜಾಗೃತಿ ಮೆರೆಯುವ ಗ್ರಾಹಕರನ್ನು ಪ್ರೋತ್ಸಾಹಿಸಲು ನೀರಿನ ಬಿಲ್ ದರದಲ್ಲಿ ಶೇ. 10 ರಷ್ಟು ರಿಯಾಯಿತಿ ನೀಡುವ ಬಗ್ಗೆ ಚಿಂತನೆ ನಡೆದಿದೆ . ವಾಣಿಜ್ಯ ಕಟ್ಟಡಗಳಿಗೂ ಈ ನೀತಿ ಅನ್ವಯವಾಗಲಿದೆ. ಸೌರಶಕ್ತಿ ಬಳಸುವ ಗ್ರಾಹಕರಿಗೆ ವಿದ್ಯುತ್ ಬಿಲ್ ನಲ್ಲಿ ರಿಯಾಯಿತಿಯನ್ನು ಸರ್ಕಾರ ಈಗಾಗಲೆ ನೀಡುತ್ತಿದೆ ಎಂದು ಕಟ್ಟಾ ಹೇಳಿದರು.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications