ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗುಡಿಸಲು ರಹಿತ ಬೆಂಗಳೂರಿಗೆ ಸಂಕಲ್ಪ

By Staff
|
Google Oneindia Kannada News

Yeddyurappa
ಬೆಂಗಳೂರು, ಡಿ. 20 : ಬೆಂಗಳೂರನ್ನು ಗುಡಿಸಲು ರಹಿತ ನಗರವಾಗಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯ ಪ್ರವೃತ್ತವಾಗಿದ್ದು, ಮುಂದಿನ ಮೂರ್ನಾಲ್ಕು ವರ್ಷಗಳಲ್ಲಿ ಇದು ಸಾಕಾರಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು.

ಬೆಂಗಳೂರು ನಗರದಲ್ಲಿ 245 ಕೊಳಚೆ ಪ್ರದೇಶಗಳನ್ನು ಘೋಷಿಸಲಾಗಿದ್ದು ಸುಮಾರು 10 ಲಕ್ಷ ಜನ ವಾಸಿಸುತ್ತಿದ್ದಾರೆ. ಬಿಎಸ್‌ಯುಪಿ ಯೋಜನೆಯಡಿಯಲ್ಲಿ ನಗರದ 58 ಕೊಳಚೆ ಪ್ರದೇಶಗಳಲ್ಲಿ ಸಮಗ್ರ ಮೂಲಭೂತ ಸೌಕರ್ಯಗಳೊಂದಿಗೆ 18,180 ಮನೆಗಳನ್ನು ರೂ. 522 ಕೋಟಿಗಳ ಅಂದಾಜು ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಅದರಲ್ಲಿ 7106 ಮನೆಗಳ ನಿರ್ಮಾಣ ಕಾರ್ಯ ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿದೆ. 2010 ಡಿಸೆಂಬರ್ ಅಂತ್ಯದೊಳಗೆ ಈ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು ಎಂದು ಅವರು ತಿಳಿಸಿದರು.

ಅವರು ಇಂದು ಕೇಂದ್ರ ಪುರಸ್ಕೃತ ಜೆಎನ್‌ಎನ್‌ಯುಆರ್‌ಎಂ ಕಾರ್ಯಕ್ರಮದಡಿಯಲ್ಲಿ ಬಿಎಸ್‌ಯುಪಿ ಮತ್ತು ಐಎಚ್‌ಎಸ್‌ಡಿಪಿ ಯೋಜನೆಗಳಡಿಯಲ್ಲಿ ಜೆಪಿ ನಗರದ ರಾಗಿಗುಡ್ಡ ಕೊಳಚೆ ಪ್ರದೇಶದಲ್ಲಿ 1500 ಮನೆಗಳ ನಿರ್ಮಾಣಕ್ಕೆ ಚಾಲನೆ ನೀಡಿ ಮಾತನಾಡಿದರು. ಕಾಮಗಾರಿಗಳ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳಬಾರದು ಎಂಬ ಕಿವಿಮಾತನ್ನೂ ಸಹ ಅವರು ಅಧಿಕಾರಿಗಳಿಗೆ ಹೇಳಿದರು.

ಕೊಳಚೆ ಪ್ರದೇಶಗಳಲ್ಲಿ ಸ್ವಚ್ಛತೆ, ನೀರು, ನೈರ್ಮಲ್ಯ ಮತ್ತು ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಆದ್ಯತೆ ನೀಡಿದೆ ಎಂದು ಅವರು ತಿಳಿಸಿದರು. ಈ ಪ್ರದೇಶದ ನಾಗರಿಕರು ಕೊಳಚೆ ನಿವಾಸಿಗಳ ಪುನರ್ವಸತಿಗೆ ಸಹಕಾರ ನೀಡುತ್ತಿರುವ ಬಗ್ಗೆ ಮುಖ್ಯಮಂತ್ರಿಗಳು ಮೆಚ್ಚುಗೆ ವ್ಯಕ್ತ ಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಾರಿಗೆ ಸಚಿವ ಆರ್. ಅಶೋಕ್ ಅವರು ಸರ್ಕಾರವು ಕೊಳಚೆ ನಿವಾಸಿಗಳೂ ಇತರರಂತೆ ಬಾಳಲು ಈ ಯೋಜನೆ ಮೂಲಕ ಅವಕಾಶ ಕಲ್ಪಿಸುತ್ತಿದೆ ಎಂದು ತಿಳಿಸಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X