ಬಾರ್ ಗರ್ಲ್ಸ್ ಕಿಡ್ಯಾಪ್, ಮೂವರಿಗೆ ಗುಂಡೇಟು

ಗುಂಡೇಟಿನಿಂದ ಗಾಯಗೊಂಡಿರುವ ಪ್ರಮುಖ ಆರೋಪಿ ವಾಸಿಂ ಖಾನ್(30), ಇನಾಯತ್(25) ಹಾಗೂ ಸೈಯದ್ ಪಾಷ(30) ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿಕಂದರ್ (27), ಜಾವೇದ್(27) ಹಾಗೂ ಟಿಪ್ಪು(28) ಎಂಬುವವರನ್ನು ಬಂಧಿಸಲಾಗಿದೆ. ಘಟನೆಯಲ್ಲಿ ಕೋರಮಂಗಲ ಠಾಣೆ ಇನ್ಸ್ ಪೆಕ್ಟರ್ ಜಿ ನಾಗರಾಜ್ ಮಡಿವಾಳ ಠಾಣೆ ಪೇದೆಗಳಾದ ಹರೀಶ್ ಹಾಗೂ ಫಕ್ರುದ್ದೀನ್ ಎಂಬುವವರು ಗಾಯಗೊಂಡಿದ್ದಾರೆ.
ಕೋರಮಂಗಲ 6ನೇ ಬ್ಲಾಕ್ ನಲ್ಲಿರುವ ಅಶೋಕ್ ರೆಸಿಡೆನ್ಸಿಯಲ್ಲಿರುವ ನೈಟ್ಸ್ ಕ್ಲಬ್ ಬಾರ್ ಅಂಡ್ ರೆಸ್ಟೋರೆಂಟ್ ಮಧ್ಯೆ ಸರಬರಾಜು ಮಾಡುವ 12 ಯುವತಿಯನ್ನು ಕೆಲಸ ಮುಗಿದ ಬಳಿಕ ಕ್ವಾಲಿಸ್ ಕಾರ್ ನಲ್ಲಿ ಮನೆಗೆ ಕಳುಹಿಸಲಾಗಿತ್ತು. ಮೂರು ಬೈಕ್ ಗಳಲ್ಲಿ ಹಿಂಬಾಲಿಸಿದ ಆರು ಮಂದಿ ಕೋರಮಂಗಲ 80 ಅಡಿ ರಸ್ತೆಯಲ್ಲಿ ಶನಿವಾರ ರಾತ್ರಿ 11.30 ರ ಸುಮಾರಿಗೆ ಕಾರನ್ನು ಅಡ್ಡಗಟ್ಟಿದರು.
ಚಾಲಕ ನಿತಿನ್ ಮೇಲೆ ಹಲ್ಲೆ ನಡೆಸಿ ಹೊರಗೆ ತಳ್ಳಿ ಯುವತಿಯರ ಸಮೇತ ಕಾರನ್ನು ಅಪಹರಿಸಿದರು. ಚಾಲಕ ತಕ್ಷಣ ಬಾರ್ ಮಾಲೀಕ ಶಿವಪ್ರಸಾದ್ ಶೆಟ್ಟಿ ಎಂಬುವವರಿಗೆ ವಿಷಯ ತಿಳಿಸಿದ. ಆಗ ಶಿವಪ್ರಸಾದ್ ಕೋರಮಂಗಳ ಠಾಣೆಗೆ ಮಾಹಿತಿ ನೀಡಿದ್ದಾರೆ. ಅಷ್ಟರಲ್ಲೇ ಬಾರ್ ಮಾಲೀಕರಿಗೆ ಕರೆ ಮಾಡಿ 4 ಲಕ್ಷ ರುಪಾಯಿ ನೀಡುವಂತೆ ವಾಸಿಂ ಬೇಡಿಕೆ ಇಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
-
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
Basavaraj Bommai: ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ












Click it and Unblock the Notifications