ಚಾಮರಾಜನಗರ:ಪಲ್ಸ್ ಪೋಲಿಯೋ ಹಾಕಿಸಿ

ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಎಲ್ಲಾ ಇಲಾಖೆಗಳ ಸಹಕಾರ ಪಡೆದು ಅತ್ಯಂತ ಯಶಸ್ವಿಯಾಗಿ ನಡೆಸಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಅಗತ್ಯವಿರುವ ಕಡೆ ಶಾಲೆಗಳಲ್ಲಿ ಬೂತ್‌ಗಳನ್ನು ತೆರೆಯಲು ವ್ಯವಸ್ಥೆ ಕಲ್ಪಿಸಬೇಕು ಮತ್ತು ಪಲ್ಸ್ ಪೋಲಿಯೋ ಲಸಿಕೆ ಹಾಕುವ ದಿನದ ಮುನ್ನದಿನ ಪ್ರತಿ ಗ್ರಾಮಗಳಲ್ಲಿಯೂ ಜಾಥಾ ಏರ್ಪಡಿಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಅವರು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗೆ ನಿರ್ದೇಶನ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಅಂಗನವಾಡಿ ಕಾರ್ಯಕರ್ತೆಯರನ್ನು ನಿಯೋಜಿಸುವುದು. ಅಂಗನವಾಡಿ ಕೇಂದ್ರಗಳಲ್ಲಿ ಲಸಿಕೆ ನೀಡಲು ವ್ಯವಸ್ಥೆ ಮಾಡಲು ಕ್ರಮಕೈಗೊಳ್ಳಬೇಕು ಎಂದು ಅವರು ತಿಳಿಸಿದರು.
ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಪ್ರಾರಂಭವಾಗುವ ಮುನ್ನದಿನ ಮತ್ತು ನಂತರದ ದಿನಗಳಲ್ಲಿ ವಿದ್ಯುತ್ ಅಗತ್ಯವಿರುವುದರಿಂದ ವಿದ್ಯುತ್ ಇಲಾಖೆಯವರು ನಿರಂತರವಾಗಿ ವಿದ್ಯುತ್ ನೀಡಬೇಕು. ವಿದ್ಯುತ್ ವ್ಯತ್ಯಯ ಉಂಟಾದರೆ ಪರ್ಯಾಯ ವ್ಯವಸ್ಥೆ ಮಾಡಿಕೊಂಡು ಲಸಿಕೆ ಹಾಕುವಂತಾಗಬೇಕು ಎಂದು ಡಿ.ಹೆಚ್.ಓ ಡಾ:ಗೋವಿಂದರಾಜು ಅವರಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕಾಗಿ 123 ವಾಹನಗಳ ಅಗತ್ಯವಿದೆ. ಆರೋಗ್ಯ ಇಲಾಖೆಯಲ್ಲಿ 13 ವಾಹನಗಳು ಲಭ್ಯವಿದ್ದು, ಉಳಿದ 110 ವಾಹನಗಳನ್ನು ವಿವಿಧ ಇಲಾಖೆಗಳಿಂದ ಒದಗಿಸಿಕೊಡಬೇಕು ಎಂದು ಮನವಿ ಮಾಡಿದರು.
ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ವಿಯಾಗಲು ಎನ್.ಜಿ.ಓ.ಗಳ ಪಾತ್ರ ಬಹುಮುಖ್ಯ. ಇಂತಹ ಸಂಘಗಳ ಸಹಕಾರ ಪಡೆಯಿರಿ ಎಂದು ಜಿಲ್ಲಾಧಿಕಾರಿ ಸಲಹೆ ಮಾಡಿದರು. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡದೆ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಪಲ್ಸ್ ಪೋಲಿಯೋ ಲಸಿಕೆಯನ್ನು ಹಾಕಿಸಿ ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು. ಜಿಲ್ಲೆಯಲ್ಲಿ ಸುಮಾರು 98209 ಮಕ್ಕಳು ಐದು ವರ್ಷದೊಳಗಿದ್ದು, ಚಾಮರಾಜನಗರ ತಾಲ್ಲೂಕಿನಲ್ಲಿ 33149, ಗುಂಡ್ಲುಪೇಟೆ ತಾಲ್ಲೂಕಿನಲ್ಲಿ 18988, ಕೊಳ್ಳೇಗಾಲ ತಾಲ್ಲೂಕಿನಲ್ಲಿ 37615, ಯಳಂದೂರು ತಾಲ್ಲೂಕಿನಲ್ಲಿ 8460 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ಮಾಹಿತಿ ನೀಡಿದರು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications