ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಾಮರಾಜನಗರ:ಪಲ್ಸ್ ಪೋಲಿಯೋ ಹಾಕಿಸಿ

By Staff
|
Google Oneindia Kannada News

Pulse Polio Program
ಚಾಮರಾಜನಗರ, ಡಿ.22:ಜನವರಿ 10 ಮೊದಲ ಹಂತ ಮತ್ತು ಫೆಬ್ರವರಿ 7ರಂದು 2 ನೇ ಹಂತದಲ್ಲಿ ನಡೆಯುವ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಎಲ್ಲಾ ಪೂರ್ವ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಮನೋಜ್‌ಕುಮಾರ್ ಮೀನಾ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ನಿರ್ದೇಶನ ನೀಡಿದ್ದಾರೆ. ಜಿಲ್ಲೆಯ ಗಡಿಭಾಗದಲ್ಲಿ ವಾಸಿಸುವ ಗಿರಿಜನರು, ಕೊಳಚೆ ಪ್ರದೇಶಗಳಲ್ಲಿ ವಾಸಿಸುವವರ ಬಗ್ಗೆ ಹೆಚ್ಚಿನ ಗಮನ ನೀಡುವುದರ ಜತೆಗೆ, ಬಸ್ ನಿಲ್ದಾಣ ಹಾಗೂ ಜನದಟ್ಟಣೆ ಪ್ರದೇಶಗಳಲ್ಲಿ ಪಲ್ಸ್ ಪೋಲಿಯೋ ಲಸಿಕೆ ಹಾಕುವ ವ್ಯವಸ್ಥೆ ಮಾಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಗೋವಿಂದರಾಜು ಅವರಿಗೆ ಸಲಹೆ ಮಾಡಿದರು.

ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಎಲ್ಲಾ ಇಲಾಖೆಗಳ ಸಹಕಾರ ಪಡೆದು ಅತ್ಯಂತ ಯಶಸ್ವಿಯಾಗಿ ನಡೆಸಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಅಗತ್ಯವಿರುವ ಕಡೆ ಶಾಲೆಗಳಲ್ಲಿ ಬೂತ್‌ಗಳನ್ನು ತೆರೆಯಲು ವ್ಯವಸ್ಥೆ ಕಲ್ಪಿಸಬೇಕು ಮತ್ತು ಪಲ್ಸ್ ಪೋಲಿಯೋ ಲಸಿಕೆ ಹಾಕುವ ದಿನದ ಮುನ್ನದಿನ ಪ್ರತಿ ಗ್ರಾಮಗಳಲ್ಲಿಯೂ ಜಾಥಾ ಏರ್ಪಡಿಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಅವರು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗೆ ನಿರ್ದೇಶನ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಅಂಗನವಾಡಿ ಕಾರ್ಯಕರ್ತೆಯರನ್ನು ನಿಯೋಜಿಸುವುದು. ಅಂಗನವಾಡಿ ಕೇಂದ್ರಗಳಲ್ಲಿ ಲಸಿಕೆ ನೀಡಲು ವ್ಯವಸ್ಥೆ ಮಾಡಲು ಕ್ರಮಕೈಗೊಳ್ಳಬೇಕು ಎಂದು ಅವರು ತಿಳಿಸಿದರು.

ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಪ್ರಾರಂಭವಾಗುವ ಮುನ್ನದಿನ ಮತ್ತು ನಂತರದ ದಿನಗಳಲ್ಲಿ ವಿದ್ಯುತ್ ಅಗತ್ಯವಿರುವುದರಿಂದ ವಿದ್ಯುತ್ ಇಲಾಖೆಯವರು ನಿರಂತರವಾಗಿ ವಿದ್ಯುತ್ ನೀಡಬೇಕು. ವಿದ್ಯುತ್ ವ್ಯತ್ಯಯ ಉಂಟಾದರೆ ಪರ್ಯಾಯ ವ್ಯವಸ್ಥೆ ಮಾಡಿಕೊಂಡು ಲಸಿಕೆ ಹಾಕುವಂತಾಗಬೇಕು ಎಂದು ಡಿ.ಹೆಚ್.ಓ ಡಾ:ಗೋವಿಂದರಾಜು ಅವರಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕಾಗಿ 123 ವಾಹನಗಳ ಅಗತ್ಯವಿದೆ. ಆರೋಗ್ಯ ಇಲಾಖೆಯಲ್ಲಿ 13 ವಾಹನಗಳು ಲಭ್ಯವಿದ್ದು, ಉಳಿದ 110 ವಾಹನಗಳನ್ನು ವಿವಿಧ ಇಲಾಖೆಗಳಿಂದ ಒದಗಿಸಿಕೊಡಬೇಕು ಎಂದು ಮನವಿ ಮಾಡಿದರು.

ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ವಿಯಾಗಲು ಎನ್.ಜಿ.ಓ.ಗಳ ಪಾತ್ರ ಬಹುಮುಖ್ಯ. ಇಂತಹ ಸಂಘಗಳ ಸಹಕಾರ ಪಡೆಯಿರಿ ಎಂದು ಜಿಲ್ಲಾಧಿಕಾರಿ ಸಲಹೆ ಮಾಡಿದರು. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡದೆ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಪಲ್ಸ್ ಪೋಲಿಯೋ ಲಸಿಕೆಯನ್ನು ಹಾಕಿಸಿ ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು. ಜಿಲ್ಲೆಯಲ್ಲಿ ಸುಮಾರು 98209 ಮಕ್ಕಳು ಐದು ವರ್ಷದೊಳಗಿದ್ದು, ಚಾಮರಾಜನಗರ ತಾಲ್ಲೂಕಿನಲ್ಲಿ 33149, ಗುಂಡ್ಲುಪೇಟೆ ತಾಲ್ಲೂಕಿನಲ್ಲಿ 18988, ಕೊಳ್ಳೇಗಾಲ ತಾಲ್ಲೂಕಿನಲ್ಲಿ 37615, ಯಳಂದೂರು ತಾಲ್ಲೂಕಿನಲ್ಲಿ 8460 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X