ಹುಬ್ಬಳ್ಳಿ ನೃಪತುಂಗ ಬೆಟ್ಟದಲ್ಲಿ ಸಾಂಸ್ಕೃತಿಕ ಸಂಜೆ
ಹುಬ್ಬಳ್ಳಿ,
ಡಿ. 22 : ಧಾರವಾಡ ಜಿಲ್ಲಾ ಆಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನೃಪತುಂಗ ಬೆಟ್ಟದ ವಾಯು ವಿಹಾರಿಗಳ ಸಂಘದ ಸಂಯುಕ್ತ ಆಶ್ರಯದಲ್ಲಿ ಡಿಸೆಂಬರ್ 27ರಂದು ಖ್ಯಾತ ಶಹನಾಯಿ ಕಲಾವಿದರಾದ ಬಸವರಾಜ ಭಜಂತ್ರಿ ಅವರಿಂದ ಶಹನಾಯಿ ವಾದನ ಕಾರ್ಯಕ್ರಮ ಆಯೋಜಿಸಲಾಗಿದೆ. id="toptextpromo">ನಾಡಿನ
ಕಲೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಉದ್ಯಾನವನದಲ್ಲಿ ಸಾಂಸ್ಕೃತಿಕ ಸಂಜೆ ಎನ್ನುವ ಯೋಜನೆ ಹುಬ್ಬಳ್ಳಿಯ ನೃಪತುಂಗ ಬೆಟ್ಟದ ಬಯಲು ರಂಗಮಂದಿರದಲ್ಲಿ ಸಂಜೆ 6 ಗಂಟೆಗೆ ಈ ಸಂಗೀತ ಕಾರ್ಯಕ್ರಮ ಜರುಗಲಿದೆ. id='are-slot-1' class='oiad oi-axt oiadv'> id='top-searched-articles'>ಬಸವರಾಜ
ಭಜಂತ್ರಿ ಅವರ ಜೊತೆ ಆಕಾಶವಾಣಿ ಹಾಗೂ ದೂರದರ್ಶನ ಕಲಾವಿದರಾದ ವೈ. ಕಾಶಣ್ಣ ಅವರು ಸುಗಮ ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. ಈ ವಿನೂತನ ಕಾರ್ಯಕ್ರಮದಲ್ಲಿ ಅವಳಿ ನಗರದ ಸಂಗೀತಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ವೀಕ್ಷಿಸಲು ಜಿಲ್ಲಾಧಿಕಾರಿಗಳಾದ ದರ್ಪಣ ಜೈನ್ ಕೋರಿದ್ದಾರೆ.











Click it and Unblock the Notifications