ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೇಣುಕಾಚಾರ್ಯ ಸಚಿವರಾಗಲಿದ್ದಾರೆ, ಸಿಎಂ

By Staff
|
Google Oneindia Kannada News

Renukacharya
ಬೆಂಗಳೂರು, ಡಿ. 22 : ನಾಯಕತ್ವದ ವಿರುದ್ಧ ಬಂಡಾಯದ ಬಾವುಟ ಹಾರಿಸಿ ರೆಸಾರ್ಟ್ ರಾಜಕಾರಣ ಆರಂಭಿಸಿ ಸರಕಾರದ ಬುಡಕ್ಕೆ ಕೈಹಾಕಲು ಯತ್ನಿಸಿದ್ದ ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯ ಅವರಿಗೆ ಕೊನೆಗೂ ಸಚಿವರಾಗುವ ಯೋಗ ಕೂಡಿಬಂದಿದೆ. ಬೆಂಗಳೂರಿನ ಹಲವು ಶಾಸಕರ ವಿರೋಧದ ನಡುವೆಯೂ ರೇಣುಕಾಚಾರ್ಯ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಿರ್ಧರಿಸಿದ್ದಾರೆ.

ಮಾಧ್ಯಮಗಳಿಗೆ ಪ್ರತಿಕ್ರಿಯ ನೀಡಿದ ಯಡಿಯೂರಪ್ಪ, ರೇಣುಕಾಚಾರ್ಯ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಲು ತೀರ್ಮಾನಿಸಲಾಗಿದೆ. ಗುರುವಾರ ಬೆಳಗ್ಗೆ ನಡೆಯುವ ಸಂಪುಟ ವಿಸ್ತರಣೆ ಕಾರ್ಯಕ್ರಮದಲ್ಲಿ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದರು. ಈ ನಿರ್ಧಾರ ಹೊರಬಿದ್ದ ನಂತರ ಬೆಂಗಳೂರಿನ ಬಿಜೆಪಿ ಶಾಸಕರು ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ರೇಣುಕಾಚಾರ್ಯ ಅವರಿಗೆ ಸಚಿವ ಸ್ಥಾನ ನೀಡದಂತೆ ಒತ್ತಡ ಹೇರಿದ್ದಾರೆ.

ಪದೆಪದೇ ಭಿನ್ನಮತೀಯ ಚಟುವಟಿಕೆ ನಡೆಸಿರುವ ವ್ಯಕ್ತಿಗೆ ಸಚಿವ ಸ್ಥಾನ ನೀಡುವುದರಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುತ್ತದೆ. ಪಕ್ಷದ ವರಿಷ್ಠರ ನಿರ್ಣಯಕ್ಕೆ ತಲೆಬಾಗಿ ನಡೆಯುವ ಶಾಸಕರನ್ನು ನಿರ್ಲಕ್ಷಿಸಿದಂತಾಗುತ್ತದೆ. ಈ ಎಲ್ಲ ಕಾರಣಗಳಿಂದ ಈಗ ಕೈಗೊಂಡಿರುವ ತೀರ್ಮಾನವನ್ನು ಕೈಬಿಡಬೇಕು ಎಂದು ಶಾಸಕರಾದ ಎಸ್ಆರ್ ವಿಶ್ವನಾಥ್, ಡಾ ಅಶ್ವತ್ಥನಾರಾಯಣ, ಎನ್ಎಸ್ ನಂದೀಶ್ ರೆಡ್ಡಿ ಮತ್ತಿತರರು ಯಡಿಯೂರಪ್ಪ ಅವರ ಮೇಲೆ ತೀವ್ರ ಒತ್ತಡ ಹೇರಿದ್ದಾರೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X