ಮಲ್ಪೆ ಶಿಪ್ ಯಾರ್ಡ್ ನಲ್ಲಿ ಕಾರ್ಮಿಕ ಸಜೀವ ದಹನ

ಘಟನೆ ಸಂಬಂಧಿಸಿದಂತೆ ವಿವರಣೆ ನೀಡಿದ ವಲಯದ ಪೊಲೀಸ್ ಆಯುಕ್ತ ಗೋಪಾಲ್ ಹೊಸೂರು, ಟೆಬ್ಮಾ ಶಿಪ್ ಯಾರ್ಡ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಒಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ. ಮೂವರಿಗೆ ಗಾಯವಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂದರ್ಭದಲ್ಲಿ ಕಾರ್ಮಿಕನೊಬ್ಬ ಮೃತಪಟ್ಟಿರುವ ಇನ್ನುಳಿದ ಕಾರ್ಮಿಕರ ಆಕ್ರೋಶ ಕಾರಣವಾಗಿದ್ದು, ಆಗ ಉದ್ರಿಕ್ತರ ಗುಂಪು ಕಾನೂನನ್ನು ಕೈಗೆ ತೆಗೆದುಕೊಳ್ಳುವ ಕೆಲಸಕ್ಕೆ ಮುಂದಾದರು. ಆಗ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಸದ್ಯ ಪರಿಸ್ಥಿತಿಯನ್ನು ಪೊಲೀಸರು ಹತೋಟಿಯಲ್ಲಿದ್ದು, ವಾತಾವರಣ ತಿಳಿಗೊಳಿಸಲಾಗಿದೆ ಎಂದು ಅವರು ಹೇಳಿದರು. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗಿದೆ.











Click it and Unblock the Notifications